Webdunia - Bharat's app for daily news and videos

Install App

ನಾಳೆಯಿಂದ ತುಮಕೂರಿನಲ್ಲಿ ನಿಲುಗಡೆಯಾಗಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್, ಸಚಿವ ವಿ ಸೋಮಣ್ಣ ಚಾಲನೆ

Sampriya
ಗುರುವಾರ, 22 ಆಗಸ್ಟ್ 2024 (20:04 IST)
Photo Courtesy X
ತುಮಕೂರು:  ಈಗಾಗಲೇ ಬೆಂಗಳೂರು ಧಾರವಾಡ ನಡುವೆ ಸಂಚಾರ ನಡೆಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ನಾಳೆಯಿಂದ ತುಮಕೂರಿನಲ್ಲಿ ನಿಲುಗಡೆಯಾಗಲಿದೆ. ಈ ಗುಡ್‌ನ್ಯೂಸ್‌ ಅನ್ನು ಕೇಂದ್ರ ರೈಲ್ವೆ ಸಹಾಯಕ ಖಾತೆ ಸಚಿವರಾದ ವಿ.ಸೋಮಣ್ಣ ಅವರು ನೀಡಿದ್ದು, ನಾಳೆ ಅವರೇ ತುಮಕೂರಿನಲ್ಲಿ ವಂದೇ ಭಾರತ್ ಸೇವೆಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ವಿ ಸೋಮಣ್ಣ ಅವರು,  ತುಮಕೂರಿನಲ್ಲಿ ವಂದೇ ಭಾರತ್ ರೈಲಿಗೆ ನಾಳೆ ಆಗಸ್ಟ್‌ 23 ರಂದು ಸಂಜೆ 5.30 ಗಂಟೆಗೆ ಚಾಲನೆ ನೀಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ ತುಮಕೂರು ಲೋಕಸಭಾ ಕ್ಷೇತ್ರದ ಸಾರ್ವಜನಿಕರು, ಪಕ್ಷದ ಕಾರ್ಯಕರ್ತರು ಆಗಮಿಸಿ, ಯಶಸ್ವಿಗೊಳಿಸಬೇಕೆಂದು ಎಂದು ಮನವಿ ಮಾಡಿದ್ದಾರೆ.

ವಂದೇ ಭಾರತ್‌ ರೈಲು ತುಮಕೂರಿನಲ್ಲಿ ನಾಳೆ ಸಂಜೆ 6.18ಕ್ಕೆ ರೈಲು ನಿಲುಗಡೆಯಾಗಲಿದೆ. ಆ ಬಳಿಕ ಆಗಸ್ಟ್‌ 24 ರಿಂದ ಧಾರವಾಡಕ್ಕೆ ತೆರಳುವಾಗ ಹಾಗೂ ಧಾರವಾಡದಿಂದ ಹಿಂದಿರುಗುವಾಗ ಬೆಳ್ಳಿಗ್ಗೆ ಹಾಗೂ ಸಂಜೆ ನಿಲುಗಡೆಯಾಗಲಿದೆ.

ಇನ್ನೂ ವಿ ಸೋಮಣ್ಣ ಅವರು ತುಮಕೂರಿಗೆ ಹಲವು ಯೋಜನೆಗಳನ್ನು ಕೈಗೊಂಡು ಈ ಬಾರಿಯ ಬಜೆಟ್‌ನಲ್ಲಿ ತುಮಕೂರು-ದಾವಣಗೆರೆ ನೇರ ರೈಲು ಮಾರ್ಗಕ್ಕೆ 150 ಕೋಟಿ ರೂ., ತುಮಕೂರು-ರಾಯದುರ್ಗಕ್ಕೆ (ಕಲ್ಯಾಣದುರ್ಗ ಮಾರ್ಗ) 250 ಕೋಟಿ ರೂ. ಅನುದಾನ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments