ಬೆಂಗಳೂರು: ಮಂಗಳವಾರ ರಾತ್ರಿಯಿಂದ ನಿರಂತರ ಮಳೆಯಾಗುತ್ತಿರುವ ಕಾರಣ ಬೆಂಗಳೂರಿನ ತಗ್ಗು ಪ್ರದೇಶಗಳು ಜಲಾವೃತವಾಗಿ ಜನರು ಪರದಾಡುತ್ತಿದ್ದಾರೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರ್ನಾಟಕದ ಒಳನಾಡಿನಲ್ಲಿ ಮಳೆ ಆರಂಭವಾಗಿದೆ. ಭಾರೀ ಮಳೆ ಹಿನ್ನೆಲೆ ಬೆಂಗಳೂರಿನ ಹಲವೆಡೆ ಭಾರೀ ಅನಾಹುತ ಸೃಷ್ಟಿಯಾಗಿದೆ.
ಮುಂಜಾಗೃತ ಕ್ರಮವಾಗಿ ನಾಳೆ ಬೆಂಗಳೂರಿನ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಾಜಧಾನಿಯಲ್ಲಿ ವ್ಯಾಪಕ ಮಳೆ ಹಿನ್ನಲೆಯಲ್ಲಿ ಅಕ್ಟೋಬರ್ 16ರಂದು ಬೆಂಗಳೂರಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಜಗದೀಶ್ ಸೂಚಿಸಿದ್ದಾರೆ.
ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅಕ್ಟೋಬರ್ 20 ರವರೆಗೆ ದಸರಾ ರಜೆ ಇದೆ. ಆದ್ರೆ ಖಾಸಗಿ ಶಾಲೆಗಳು ಶಾಲೆ ಆರಂಭ ಮಾಡಿವೆ. ಸೋಮವಾರದಿಂದಲೆ ಖಾಸಗಿ ಶಾಲೆಗಳು ಪುನರಾರಂಭವಾಗಿವೆ.
ಮಳೆ ಹಿನ್ನೆಲೆ ಮಕ್ಕಳಿಗೆ ಶಾಲೆಗೆ ಬರಲು ಕಷ್ಟವಾಗುವ ಕಾರಣ ರಾಜಧಾನಿಯ ಶಾಲೆಗಳಿಗೆ ರಜೆ ನೀಡಲು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಸೂಚನೆ ನೀಡಿದ್ದಾರೆ.