Publish Date: Tue, 19 Oct 2021 (21:35 IST)
Updated Date: Tue, 19 Oct 2021 (21:37 IST)
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇಂದು ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಹಾವೇರಿ, ಉತ್ತರ ಒಳನಾಡಿನಲ್ಲಿ ಮಳೆಯಾಗಲಿದ್ದು, ನಾಳೆಯಿಂದ ಮಳೆಯ ಆರ್ಭಟ ಕಡಿಮೆಯಾಗುವ ನಿರೀಕ್ಷೆ ಇದೆ.
ಚಿತ್ರದುರ್ಗ, ತುಮಕೂರು, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು, ರಾಮನಗರ ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಮಳೆಯಾಗಲಿದೆ.ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಯಾದಗಿರಿ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ರಾಯಚೂರು, ಹಾವೇರಿ ಜಿಲ್ಲೆಗಳ ಕೆಲವು ಭಾಗದಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.