Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕರ್ನಾಟಕ ರಾಜ್ಯದಲ್ಲಿ ಹಿಂದಿ ಭಾಷೆ ಹೇರಿಕೆ ಮಾಡುವುದನ್ನು ಖಂಡಿಸಿ ಇದೇ 21ರಂದು ಬೆಂಗಳೂರಿನಲ್ಲಿ ಕನ್ನಡ ಚಳುವಳಿ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಲಿದ್ದಾರೆ ಎಂದು ವಾಟಾಳ್ ನಾಗರಾಜ್ ಚಾಮರಾಜನಗರದಲ್ಲಿ ಹೇಳಿದರು.
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ವಾಟಾಳ್ ನಾಗರಾಜ್, ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಸಾರ್ವಭೌಮ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಹಿಂದಿ ಭಾಷೆಗೆ ಅವಕಾಶ ಕೊಡುವುದಿಲ್ಲ ಹಿಂದಿ ಭಾಷೆ ಕಡ್ಡಾಯಗೊಳಿಸಬಾರದು ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು ಇದು ಇಡೀ ರಾಜ್ಯದ ಕನ್ನಡಿಗರ ಧ್ವನಿಯಾಗಿದೆ ಕನ್ನಡ ಭಾಷೆಗೆ ಧಕ್ಕೆ ಆದರೆ ರಾಜ್ಯದಲ್ಲಿ ಉಗ್ರವಾದ ಹೋರಾಟ ಚಳುವಳಿ ನಡೆಯಲಿದೆ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.