Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗೈರುಹಾಜರಾಗಿದ್ದ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ವಿರುದ್ಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಾವು ಮುಂದಿನ ವಿಧಾನಸಭೆ ಚುನಾವಣೆಯ ಬಗ್ಗೆ ತಲೆಕೆಡಿಸಿಕೊಂಡಿದ್ದೇವೆ. ನೀವು ಸಚಿವರ ಪ್ರತಿಜ್ಞಾವಿಧಿ ಸಮಾರಂಭಕ್ಕೆ ಗೈರುಹಾಜರಾಗಿದ್ದೀರಿ ಎಂದು ಖಾರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಜೆ..ಸಿ. ಚಂದ್ರಶೇಖರ್ ಪರ ನೀವ್ಯಾಕೆ ಯಾಕೆ ತಲೆಕೆಡಿಸಿಕೊಂಡಿದ್ದೀರಾ? ಅವರು ಎಷ್ಟು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರವಾಗಿ ಮತಯಾಚಿಸಿದ್ದಾರೆ. ಎಷ್ಟು ಬೂತ್ ಮಟ್ಟದ ಕಮಿಟಿ ರಚಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಚಂದ್ರಶೇಖರ್ ನೀಡಿದ ಕೊಡುಗೆ ಏನು? ಎಂದು ಪ್ರಶ್ನಿಸಿದ್ದಾರೆ.
ನಿಮ್ಮ ನಡೆಯಿಂದ ಸಾರ್ವಜನಿಕರಿಗೆ ತಪ್ಪು ಮಾಹಿತಿ ಹೋಗುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ತೀವ್ರ ತೊಂದರೆಯಾಗುತ್ತಿದೆ. ಕೂಡಲೇ ಪತ್ರಿಕಾಗೋಷ್ಠಿ ನಡೆಸಿ ವರದಿಗಳಿಗೆ ಅಂತ್ಯ ಹಾಡಿ ಎಂದು ಪರಮೇಶ್ವರ್‌ಗೆ ತಾಕೀತು ಮಾಡಿದ್ದಾಗಿ ಮೂಲಗಳು ತಿಳಿಸಿವೆ.
ವೇಣುಗೋಪಾಲ್ ಅಸಮಾಧಾನದಿಂದ ಕಂಗಾಲಾದ ಜಿ.ಪರಮೇಶ್ವರ್ ಇಂದು ಪತ್ರಿಕಾಗೋಷ್ಠಿ ನಡೆಸಿ ಉಹಾಪೋಹ ವರದಿಗಳಿಗೆ ತೆರೆ ಎಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.