ಚಿಕ್ಕಬಳ್ಳಾಪುರ ತಾಲೂಕಿನ ಹಲವು ಗ್ರಾಮಗಳಲ್ಲಿ ಇಂದು, ಬುಧವಾರ ಮುಂಜಾನೆ 3 ಗಂಟೆಗೆ ಭೂಮಿ ಕಂಪಿಸಿದ್ದು ಜನರು ಮತ್ತೊಮ್ಮೆ ಬೆಚ್ಚಿಬಿದ್ದಿದ್ದಾರೆ.
ರಿಕ್ಟರ್ ಮಾಪಕದಲ್ಲಿ 2.6 ತೀವ್ರತೆಯ ಭೂಕಂಪವಿದೆ. ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ, ಬೋಗಪರ್ತಿ ಶೆಟ್ಟಿಗೆರೆ, ಅಡ್ಡಗಲ್, ಬೀರಗಾನಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಭೂಮಿ ಕಂಗೊಳಿಸಿದೆ. ಗ್ರಾಮಸ್ಥರಿಗೆ ಭೂಮಿ ಕಂಪಿಸಿದ ಅನುಭವ ಉಂಟಾದ ಹಿನ್ನೆಲೆ ಭಯಗೊಂಡು ಮನೆಯಿಂದ ಹೊರ ಬಂದು ಚಳಿಯಲ್ಲೇ ಕಾಲ ಕಳೆದಿದ್ದಾರೆ. ಸುಮಾರು 3 ಸೆಂಕೆಡ್ಗಳ ಕಾಲ 2.6 ತೀವ್ರತೆಯಲ್ಲಿ ಭೂಮಿ ಕಂಪಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಳೆದ ತಿಂಗಳು ಸಹ ಈ ಗ್ರಾಮಗಳಲ್ಲಿ ಭೂಕಂಪನ ಉಂಟಾಗಿತ್ತು. ಸಾಕಷ್ಟು ಮನೆಗಳು ಬಿರುಕು ಬಿಟ್ಟಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಜಿಲ್ಲೆಯಲ್ಲಿ ಕಳೆದ 30 ದಿನಗಳಲ್ಲಿ 3 ಬಾರಿ ಭೂಕಂಪನ ಸಂಭವಿಸಿದೆ.