Webdunia - Bharat's app for daily news and videos

Install App

ಆ.20ಕ್ಕೆ ವಿಶ್ವವಿಖ್ಯಾತ ಹಂಪಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಭೇಟಿ

Webdunia
ಬುಧವಾರ, 18 ಆಗಸ್ಟ್ 2021 (13:37 IST)
ವಿಜಯನಗರ, ಆಗಸ್ಟ್ 18: ಇದೇ ಆಗಸ್ಟ್ 20 ಮತ್ತು 21 ರಂದು ತುಂಗಭದ್ರಾ ಜಲಾಶಯ ಮತ್ತು ಐತಿಹಾಸಿಕ ಹಂಪಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಭೇಟಿ ನೀಡಲಿದ್ದಾರೆ. ಗಣ್ಯರ ಭೇಟಿ ಹಿನ್ನೆಲೆ ಬರಮಾಡಿಕೊಳ್ಳಲು ಹಂಪಿಯಲ್ಲಿ ಪೂರ್ವ ಸಿದ್ಧತಾ ಕಾರ್ಯ ಜೋರಾಗಿ ನಡೆಯುತ್ತಿದೆ.

ಆಗಸ್ಟ್ 20 ರಂದು ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಹೊಸಪೇಟೆ ನಗರದ ತಾಲೂಕು ಕ್ರೀಡಾಂಗಣಕ್ಕೆ ಸಂಜೆ 5.20ಕ್ಕೆ ಕುಟುಂಬ ಸಮೇತರಾಗಿ ಆಗಮಿಸಲಿರುವ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಬಳಿಕ ತುಂಗಭದ್ರಾ ಜಲಾಶಯ ವೀಕ್ಷಿಸಲಿದ್ದಾರೆ. ಆನಂತರ ಕಮಲಾಪುರದ ಮಯೂರ ಭುವನೇಶ್ವರಿ ಹೊಟೇಲ್ನಲ್ಲಿ ತಂಗಲಿದ್ದಾರೆ.
ಆ.21 ರಂದು ವಿಶ್ವಪ್ರಸಿದ್ಧ ಹಂಪಿಯ ಸ್ಮಾರಕಗಳನ್ನು ವೀಕ್ಷಿಸಲಿದ್ದಾರೆ. ಇಲ್ಲಿನ ಶ್ರೀವಿರೂಪಾಕ್ಷೇಶ್ವರ ದೇವಸ್ಥಾನ, ಕಡಲೆ ಕಾಳು, ಸಾಸಿವೆ ಕಾಳು ಗಣೇಶ ಮಂಟಪಗಳು, ಶ್ರೀಕೃಷ್ಣ ದೇವಸ್ಥಾನ, ಕಮಲ ಮಹಲ, ಗಜಶಾಲೆ, ಮಹಾನವಮಿ ದಿಬ್ಬ, ವಿಜಯ ವಿಠ್ಠಲ ದೇಗುಲ, ಕಲ್ಲಿನ ತೇರು ಸೇರಿದಂತೆ ನಾನಾ ಸ್ಮಾರಕಗಳನ್ನು ವೀಕ್ಷಿಸಲಿದ್ದಾರೆ. ನಂತರ ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.
ಆಗಸ್ಟ್ 22 ರಂದು ವಿಶೇಷ ಹೆಲಿಕಾಪ್ಟರ್ನಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಆಗಮನದ ಹಿನ್ನೆಲೆಯಲ್ಲಿ ಹಂಪಿಯಲ್ಲಿನ ಸ್ಮಾರಕಗಳ ಸುತ್ತ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುತ್ತಿದೆ. ಜತೆಗೆ ಸ್ಮಾರಕಗಳಿಗೆ ಕಟ್ಟಿಗೆ ಮೆಟ್ಟಿಲು ಕೂಡ ಜೋಡಿಸಲಾಗಿದೆ. ಬಿಗಿ ಭದ್ರತೆಗೆ ಕ್ರಮ ಕೈಗೊಂಡಿದ್ದು, ಅವರ ಜೊತೆ ಉಪರಾಷ್ಟ್ರಪತಿ ಕಚೇರಿಯ ಕೆಲ ಅಧಿಕಾರಿಗಳು ಕೂಡ ಇರಲಿದ್ದಾರೆ.
ಮಳೆಯಿಂದ ಅಲ್ಲಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಲಾಗುತ್ತಿದೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸ್ಮಾರಕ ಏರಿ ಇಳಿಯಲು ಸಹಾಯವಾಗುವ ತಾತ್ಕಾಲಿಕ ಕಟ್ಟಿಗೆಯ ಮೆಟ್ಟಿಲು ನಿರ್ಮಿಸಲಾಗುತ್ತಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments