ಭಾರೀ ಮಳೆಯಿಂದಾಗಿ ಎಲ್ಲವನ್ನೂ ಕಳೆದುಕೊಂಡ ಸಂತ್ರಸ್ಥರು ಇದೀಗ ಬೀದಿಗೆ ಇಳಿದು ಹೋರಾಟ ಮಾಡುತ್ತಿದ್ದಾರೆ. ಭಿಕ್ಷುಕರಿಗಿಂತ ಕಡೆಯಾಗಿ ತಮ್ಮನ್ನು ನೋಡಿಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಡಗು ಜಿಲ್ಲೆಯ ಕುಶಾಲನಗರದ ವಾಲ್ಮೀಕಿ ಭವನದಲ್ಲಿರುವ ಸಂತ್ರಸ್ತರಿಂದ ಮುಖ್ಯರಸ್ತೆಗೆ ಬಂದು ಪ್ರತಿಭಟನೆ ನಡೆಸಲಾಗಿದೆ. ಊಟ ವಸತಿ ಸರಿಯಿಲ್ಲ ಎಂಬ ಆರೋಪ ಕೇಳಿಬಂದಿದೆ. ಭಿಕ್ಷುಕರಿಗಿಂತಲೂ ಕೆಟ್ಟದಾಗಿ ನಮ್ಮನ್ನು ಕಾಣಲಾಗುತ್ತಿದೆ. ಮೂಲ ಸೌಲಭ್ಯಗಳನ್ನು ಕೊಡದೇ ಕತ್ತಲಲ್ಲಿ ಇಡಲಾಗಿದೆ ಎಂಬ ಅರೋಪ ಕೇಳಿಬಂದಿದೆ.
ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರಬೇಕೆಂದು ಸಂತ್ರಸ್ತರ ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಪ್ರತಿಭಟನಾ ನಿರತರನ್ನ ಪೊಲೀಸರು ಸಮಾಧಾನ ಪಡಿಸಲು ಪ್ರಯತ್ನ ನಡೆಸಿದರು.