Publish Date: Wed, 07 Feb 2018 (10:08 IST)
Updated Date: Wed, 07 Feb 2018 (10:10 IST)
ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ನಟಿ ರಮ್ಯಾ ಮಾತನಾಡುತ್ತಿರುವ ವಿಡಿಯೋವೊಂದು ಈಗ ಭಾರೀ ಸದ್ದು ಮಾಡುತ್ತಿದೆ.
ಕಾರ್ಯಗಾರವೊಂದರಲ್ಲಿ ರಮ್ಯಾ ನಕಲಿ ಸಾಮಾಜಿಕ ಜಾಲತಾಣದ ಖಾತೆಗಳನ್ನು ತೆರೆಯುವಂತೆ ಕರೆ ಕೊಡುತ್ತಿರುವ ವಿಡಿಯೋವೊಂದು ಟ್ವಿಟರ್ ನಲ್ಲಿ ಹರಿದಾಡುತ್ತಿದೆ. ಇದೀಗ ಬಿಜೆಪಿಗೆ ರಮ್ಯಾ ವಿರುದ್ಧ ಮತ್ತೊಂದು ಟೀಕಾಸ್ತ್ರ ಸಿಕ್ಕಂತಾಗಿದೆ.
ಈ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿರುವ ರಮ್ಯಾ ಈ ವಿಡಿಯೋವನ್ನು ತಮಗೆ ಬೇಕಾದ ಹಾಗೆ ತಿರುಚಿದ್ದಾರೆ. ಎಂಜಾಯ್ ಮಾಡಿ ಎಂದಿದ್ದಾರೆ. ಅಂತೂ ಚುನಾವಣೆ ಕಾಲಕ್ಕೆ ರಮ್ಯಾ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಗೆ ಗ್ರಾಸವಾಗುತ್ತಿರುವುದಂತೂ ನಿಜ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ