ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ವಿದ್ವತ್ ಎಂಬಾತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ಸಂಗಡಿಗರಿಗೆ ಸೆಷನ್ಸ್ ಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿದೆ.
ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನಲಪಾಡ್ ಹಾಗೂ 9 ಮಂದಿ ಸಹಚರರನ್ನು 8 ನೇ ಎಂಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಮಾರ್ಚ್ 7 ರವರೆಗೆ ನ್ಯಾಯಾಂಗ ಬಂಧನದಲ್ಲಿಡಲು ಆದೇಶಿಸಿದ್ದಾರೆ.
ಇದರಿಂದಾಗಿ ಇಂದೇ ಜಾಮೀನು ಪಡೆದು ಹೊರಬರುವ ನಲಪಾಡ್ ಮತ್ತು ಗ್ಯಾಂಗ್ ನಿರೀಕ್ಷೆ ಹುಸಿಯಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ