Daily Horoscope
✕

ವಿಕಸಿತ ಭಾರತದ ಸಂಕಲ್ಪಕ್ಕೆ ಪೂರಕ ಬಜೆಟ್: ವಿಜಯೇಂದ್ರ

Krishnaveni K
ಭಾನುವಾರ, 1 ಫೆಬ್ರವರಿ 2026 (13:44 IST)
ಶಿವಮೊಗ್ಗ: ಪ್ರಧಾನಮಂತ್ರಿಗಳ ವಿಕಸಿತ ಭಾರತದ ಸಂಕಲ್ಪಕ್ಕೆ ಪೂರಕವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಮಂಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ.

ಕೇಂದ್ರದ ಆಯವ್ಯಯಪತ್ರ ಮಂಡನೆಯನ್ನು ಇಂದು ವೀಕ್ಷಿಸಿದ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. 3 ಕರ್ತವ್ಯಶಕ್ತಿಗಳ ಆಧಾರದ ಮೇಲೆ ಮಂಡಿಸಲ್ಪಟ್ಟ ಬಜೆಟ್ ಇದಾಗಿದೆ. ಉತ್ಪಾದನಾ ಹೆಚ್ಚಳ, ಜನರ ಆಶೋತ್ತರಗಳ ಈಡೇರಿಕೆ ಹಾಗೂ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಂಶಗಳನ್ನು ಗಮನದಲ್ಲಿ ಇಟ್ಟುಕೊಂಡು ತಮ್ಮ ಬಜೆಟ್ ಮಂಡಿಸಿದ್ದಾರೆ ಎಂದು ವಿವರಿಸಿದರು.

ಕೈಗಾರಿಕೆ, ಪ್ರವಾಸೋದ್ಯಮ, ಐಟಿ, ಬಿಟಿ, ವಿಶೇಷವಾಗಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಿಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು. ಎಲ್ಲ ಕ್ಷೇತ್ರಗಳಿಗೆ ಅವರು ಆದ್ಯತೆ ನೀಡಿದ್ದಾರೆ. ಯುವ ಶಕ್ತಿಗೂ ಪೂರಕ ಬಜೆಟ್ ಮಂಡಿಸಿದ್ದಾರೆ. ಕ್ರೀಡಾ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಪ್ರಕಟಿಸಿದ್ದಾರೆ ಎಂದು ತಿಳಿಸಿದರು.

ನಾರಿ ಶಕ್ತಿಗೆ ಆದ್ಯತೆ ಕೊಟ್ಟಿದ್ದು, ಎಲ್ಲಕ್ಕಿಂತ ಪ್ರಮುಖವಾಗಿ ಹೊಸ ತೆರಿಗೆಗೆ ಅವಕಾಶ ನೀಡದೇ, ಹೊಸ ತೆರಿಗೆ ಹೇರದೇ ಸರ್ವಸ್ಪರ್ಶಿ, ಸರ್ವವ್ಯಾಪ್ತಿಯಡಿ ಎಲ್ಲ ಕ್ಷೇತ್ರಗಳಿಗೂ ಆದ್ಯತೆ ನೀಡಿದ್ದಾರೆ. ಈ ದೇಶದ ಸರ್ವತೋಮುಖ ಅಭಿವೃದ್ಧಿಗೆ, ಮುಂದಿನ ದಿನಗಳಲ್ಲಿ ಭಾರತವು ಆರ್ಥಿಕವಾಗಿ ಇನ್ನಷ್ಟು ಸದೃಢವಾಗುವ ನಿಟ್ಟಿನಲ್ಲಿ, ಭಾರತವು ವಿಶ್ವಗುರು ಆಗುವ ನಿಟ್ಟಿನಲ್ಲಿ ಒಂದು ಉತ್ತಮ ಬಜೆಟ್ ಅನ್ನು ಮಂಡಿಸಿದ್ದಾರೆ ಎಂದು ಶ್ಲಾಘಿಸಿದರು.

ಈ ದೇಶದ ಪ್ರತಿಯೊಬ್ಬರೂ ಈ ಬಜೆಟ್ ವೀಕ್ಷಿಸಿದ್ದಾರೆ. ರೈತಾಪಿವರ್ಗ, ಮಹಿಳೆಯರು, ಯುವಕರು, ಬಡವರು ಸೇರಿ ಪ್ರತಿಯೊಬ್ಬರೂ ಈ ಬಜೆಟ್ ಸ್ವಾಗತಿಸುತ್ತಿದ್ದಾರೆ. ನಾವೆಲ್ಲರೂ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 9ನೇ ಬಜೆಟ್ ಅನ್ನು ಸಂತೋಷದಿಂದ ಸ್ವಾಗತ ಮಾಡುತ್ತೇವೆ ಎಂದರು.
ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಅನ್ಯಾಯ ಆಗಿದೆಯೇ ಅಥವಾ ಅನುಕೂಲ ಆಗಿದೆಯೇ ಎಂಬ ಕುರಿತು ನಾಳೆ ಮಾತನಾಡುವುದಾಗಿ ಅವರು ಪ್ರಶ್ನೆಗೆ ಉತ್ತರಿಸಿದರು. ಟೀಕೆ ಮಾಡುವುದೇ ಸಿದ್ದರಾಮಯ್ಯರ ಸರಕಾರದ ಸಾಧನೆ ಎಂದು ಆಕ್ಷೇಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments