Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ದೋಸ್ತಿಗಳ ನಡುವೆ ಭಿನ್ನಾಭಿಪ್ರಾಯ ಬೆನ್ನಲ್ಲೇ ಅಮಿತ್ ಶಾರನ್ನು ಭೇಟಿಯಾದ ವಿಜಯೇಂದ್ರ

ದೋಸ್ತಿಗಳ ನಡುವೆ ಭಿನ್ನಾಭಿಪ್ರಾಯ ಬೆನ್ನಲ್ಲೇ ಅಮಿತ್ ಶಾರನ್ನು ಭೇಟಿಯಾದ ವಿಜಯೇಂದ್ರ

Sampriya

ಬೆಂಗಳೂರು , ಬುಧವಾರ, 31 ಜುಲೈ 2024 (16:49 IST)
Photo Courtesy X
ಬೆಂಗಳೂರು: ಮುಡಾ ಹಗರಣವನ್ನು ಖಂಡಿಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಬಿಜೆಪಿ ಪಕ್ಷ ಬೆಂಗಳೂರು ಮೈಸೂರು ಪಾದಯಾತ್ರೆಯನ್ನು ಹಮ್ಮಿಕೊಂಡಿದೆ. ಇದರ ಬೆನ್ನಪ್ಪೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ದೆಹಲಿಯಲ್ಲಿ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಅಮಿತ್ ಶಾ ಅವರನ್ನು ಭೇಟಿ ಮಾಡಿದ ವಿಜಯೇಂದ್ರ ಕೆಲಹೊತ್ತು ಮಾತುಕತೆಯನ್ನು ನಡೆಸಿದರು. ಪಾದಯಾತ್ರೆಗೆ ವಿರೋಧ ಹಿನ್ನೆಲೆಯಲ್ಲಿ ಈ ಭೇಟಿ ಮತ್ತು ಮಾತುಕತೆ ಮಹತ್ವ ಪಡೆದುಕೊಂಡಿದೆ. ಈ ಮಾತುಕತೆಯಲ್ಲಿ ಅಮಿತ್ ಶಾ ಅವರ ಜತೆ ರಾಜ್ಯದ ಪ್ರಸ್ತುತ ರಾಜಕೀಯ ಸಂಗತಿಗಳ ಕುರಿತು ವಿಜಯೇಂದ್ರ ಮಾತನಾಡಿದ್ದಾರೆ ಎನ್ನಲಾಗಿದೆ.

ಮೂಡಾ ಹಗರಣದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಹಾಗೂ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಆಗಸ್ಟ್‌ 3 ರಿಂದ 10 ವರೆಗೆ ಬೆಂಗಳೂರು ಟು ಮೈಸೂರು ಪಾದಯಾತ್ರೆ ಹಮ್ಮಿಕೊಂಡಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ದರ್ಶನ್‌ ಕೇಸ್‌ನಲ್ಲಿ ಹೀರೋ ಆಗಿದ್ದ ಎಸಿಪಿ ಚಂದನ್ ಕುಮಾರ್ ವಿರುದ್ಧ ಪೊಲೀಸ್‌ ಆಯುಕ್ತರಿಗೆ ದೂರು