ಬೆಂಗಳೂರು : ಸರ್ಕಾರದ ಆಡಳಿತದಲ್ಲಿ ಸಿಎಂ ಪುತ್ರ ವಿಜಯೇಂದ್ರ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪಕ್ಕೆ ಇದೀಗ ಸಿಎಂ ಪುತ್ರ ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ.
ಸಿಎಂ ಪುತ್ರ ವಿಜಯೇಂದ್ರ ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪ ಹಿಂದಿನಿಂದಲೂ ಕೇಳಿಬರುತ್ತಿತ್ತು. ಆದರೆ ಇದೀಗ ಡಿಸಿಎಂ ಡಾ.ಅಶ್ವತ್ ನಾರಾಯಣ್ ನೇತೃತ್ವದಲ್ಲಿ ನಡೆದ ಬೆಂಗಳೂರಿನ ವಾಹನ ದಟ್ಟಣೆ ಸಮಸ್ಯೆ ಪರಿಹಾರ ಕುರಿತಾದ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಉನ್ನತ ಅಧಿಕಾರಿಗಳು, ತಜ್ಞರು ಭಾಗವಹಿಸಿದ್ದು, ಈ ವೇಳೆ ವಿಜಯೇಂದ್ರ ಕೂಡ ಭಾಗಿಯಾಗಿದ್ದು ಚರ್ಚೆಗೆ ಕಾರಣವಾಗಿದೆ.
ಈ ಬಗ್ಗೆ ಟ್ವೀಟರ್ ನಲ್ಲಿ ಸ್ಪಷ್ಟನೆ ನೀಡಿದ ವಿಜಯೇಂದ್ರ, ಲಂಡನ್ ನಿಂದ ಆಗಮಿಸಿದ್ದ ಸಂಚಾರಿ ತಜ್ಷರೊಂದಿಗೆ ಬೇಂಗಳೂರಿನ ವಾಹನ ದಟ್ಟಣೆ ಪರಿಹಾರದ ನಿಟ್ಟಿನಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಿತ್ರರಾದ ಆರ್.ಕೆ.ಮಿಶ್ರ ಮತ್ತು ಯುನೈಟೆಡ್ ಸಂಸ್ಥೆಯ ಪ್ರಶಾಂತ್ ಪ್ರಕಾಶ್ ಅವರೊಂದಿಗೆ ಸಾಮಾನ್ಯ ನಾಗರಿಕನಾಗಿ ಭಾಗವಹಿಸಿದ್ದೆ ಎಂದು ತಿಳಿಸಿದ್ದಾರೆ.