ಧಾರವಾಡ: ಯುವತಿಯನ್ನು ಚುಡಾಯಿಸಲು ಬಂದ ಅನ್ಯ ಕೋಮಿನ ಯುವಕನನ್ನು ಗ್ರಾಮಸ್ಥರೇ ಹಿಡಿದು ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ.
ಯುವತಿಯ ಹಿಂದೆ ಬಿದ್ದಿದ್ದ ಯುವಕ ಸದಾ ಕಿರುಕುಳ ನೀಡಿದ್ದ. ಈ ಬಗ್ಗೆ ಎಚ್ಚರಿಕೆ ನೀಡಿದರೂ ಪ್ರಯೋಜನವಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಯುವತಿಯ ತಾಯಿ ಥಳಿಸಿದ್ದರು.
ಇದಾದ ಬಳಿಕ ವಿಷಯ ತಿಳಿದ ಸ್ಥಳೀಯರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ.