ಉಡುಪಿ: ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ವಂಚಿತರಾಗಿ ಬಂಡಾಯವಾಗಿ ಸ್ಪರ್ಧೆಗಿಳಿದಿರುವ ರಘುಪತಿ ಭಟ್ ಅವರಿಗೆ ಬಿಜೆಪಿ ನೋಟಿಸ್ ಜಾರಿ ಮಾಡಿದೆ.
ನೋಟಿಸ್‌ನಲ್ಲಿ ಮುಂದಿನ ತಿಂಗಳು ನಡೆಯುವ ವಿಧಾನಪರಿಷತ್ ಚುನಾವಣೆಗೆ ನೈರುತ್ಯ ಪದವೀಧರ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಯಾಗಿ ಸ್ಪರ್ಧಿಸುತ್ತಿರೀರಿ. ಇದು ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿದಂತಾಗಿದೆ. ಆದುದರಿಂದ ಈ ಪತ್ರ ತಲುಪಿದ ಎರಡು ದಿನದ ಒಳಗಾಗಿ ಬಿಜೆಪಿ ಶಿಸ್ತು ಸಮಿತಿಯ ಮುಂದೆ ಸ್ಪಷ್ಠೀಕರಣ ನೀಡಬೇಕೆಂದು ನೋಟಿಸ್ ನೀಡಿದೆ.
ಶಿಕ್ಷಕರ ಕ್ಷೇತ್ರದ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ರಘುಪತಿ ಭಟ್ ಬಹಿರಂಗವಾಗಿ ಬಿಜೆಪಿ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು. 1994 ರಿಂದಲೂ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಕಾರ್ಯಕರ್ತನಾಗಿ, ಪದಾಧಿಕಾರಿಯಾಗಿ ವಿವಿಧ ಸ್ಥರಗಳಲ್ಲಿ ಕೆಲಸ ಮಾಡಿದ್ದೇನೆ. ವಿಧಾನ ಸಭೆಗೆ ಸ್ಪರ್ಧಿಸಿದ 3 ಬಾರಿಯೂ ಗೆದ್ದಿರುತ್ತೇನೆ. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನಗೆ ಯಾವುದೇ ಮಾಹಿತಿ ನೀಡದೆ ನನ್ನನ್ನು ಬದಲಾಯಿಸಲಾಯಿತು. ಈಗ ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ.
ಇದು ಪಕ್ಷದ ಪ್ರತಿಯೊಬ್ಬ ಸಾಮಾನ್ಯ ಕಾರ್ಯಕರ್ತ ಮತ್ತು ಪಕ್ಷದ ಅಭಿಮಾನಿಗಳು ಚಿಂತಿಸುವ ಕಾಲ ಎಂದು ರಘುಪತಿ ಭಟ್ ಬಿಜೆಪಿ ವಿರುದ್ಧ ಬೇಸರ ಹೊರಹಾಕಿದ್ದರು.<>