Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ನೀತಿ ಸಂಹಿತೆ ಉಲ್ಲಂಘನೆ: ಕೈ ನಾಯಕರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ನೀತಿ ಸಂಹಿತೆ ಉಲ್ಲಂಘನೆ: ಕೈ ನಾಯಕರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

Sampriya

ಬೆಂಗಳೂರು , ಭಾನುವಾರ, 31 ಮಾರ್ಚ್ 2024 (18:18 IST)
Photo Courtesy X
ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರ ಮತ್ತು ಶಾಸಕರ ಕಚೇರಿಗಳಲ್ಲಿ ರಾಜಕೀಯ ಚಟುವಟಿಕೆ ಮುಂದುವರೆದಿರುವ ಕುರಿತು ಬಿಜೆಪಿ ನಿಯೋಗವು ಇಂದು ರಾಜ್ಯದ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ಸಲ್ಲಿಸಿತು.

ದೂರಿನಲ್ಲಿ ಹೀಗಿದೆ: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ವಿಧಾನಸೌಧವನ್ನು ಕಾಂಗ್ರೆಸ್ ಕಚೇರಿಯೊಂದು ಭಾವಿಸಿರುವಂತೆ ಕಾಣುತ್ತಿದೆ.ದಿನಾಂಕ 30 ಮಾರ್ಚ್ 30ರಂದು ಡಿಕೆ ಶಿವಕುಮಾರ್ ಅವರಯು ವಿಧಾನಸೌಧ ಕಚೇರಿಯಲ್ಲಿ ನಜ್ಮಾ ನಜೀರ್ ಚಿಕ್ಕನೇರಳೆಯನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ  ಕಾರ್ಯಕ್ರಮವನ್ನು ಹಮ್ಮಿಕೊಂಡು ಜಾರಿಯಲ್ಲಿರುವ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ.

ನಿಯೋಗದಲ್ಲಿ ಶಾಸಕರಾದ ಸುರೇಶ್,  ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ ನಾರಾಯಣ, ರಾಜ್ಯ ವಕ್ತಾರಪ್ರಕಾಶ್‌ ಎಸ್.‌, ಹೆಚ್.‌ ಎನ್.‌ ಚಂದ್ರಶೇಖರ್‌, ಬೆಂಗಳೂರು ದಕ್ಷಿಣ ಜಿಲ್ಲಾ ವಕ್ತಾರ ಶ್ರೀ ಟಿ. ಎಸ್.‌ ಸಂಕೀರ್ತ್‌ ಮತ್ತು ಪ್ರಮುಖರು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ, ಆರ್‌ಸ್ಸೆಸ್ಸೆ ವಿಷದಂತೆ: ಕೇಂದ್ರದ ವಿರುದ್ದ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ