Webdunia - Bharat's app for daily news and videos

Install App

ಹಲ್ಲೆ ಪ್ರಕರಣ: ಕೊನೆಗೂ ಶಾಸಕ ಕಾಗೆ ಬೆಂಬಲಿಗರ ಬಂಧನ

Webdunia
ಭಾನುವಾರ, 15 ಜನವರಿ 2017 (10:40 IST)
ಕಾಂಗ್ರೆಸ್ ಮುಖಂಡ ವಿವೇಕ್ ಶೆಟ್ಟಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ರಾಜು ಕಾಗೆ ಅವರ ಬೆಂಬಲಿಗರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
 
ಪ್ರಕರಣಕ್ಕೆ ಸಂಬಂಧಿಸಿದಂತೆ ರವೀಂದ್ರ ನಾಗವಾನಿ, ಮಲಗೌಡ ಪಾಟೀಲ್, ಶಂಕರ್ ವಾಗಮೋಡೆ ಹಾಗೂ ನಾಂದಣಿ ಎಂಬುವವರನ್ನು ಕಾಗವಾಡ ಪೊಲೀಸರು ಬಂಧಿಸಿದ್ದಾರೆ. ಹಾಗೂ ತಲೆಮರೆಸಿಕೊಂಡಿರುವ ಮುಖ್ಯ ಆರೋಪಿಗಳು ಮಾತ್ರ ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಫೇಸ್‌ಬುಕ್‌ನಲ್ಲಿ ಕೆಟ್ಟದಾಗಿ ಕಮೆಂಟ್ ಮಾಡಿದ್ದಕ್ಕೆ ಕಾಂಗ್ರೆಸ್ ನಾಯಕನ ಮನೆಗೆ ನುಗ್ಗಿ ಬಿಜೆಪಿ ಶಾಸಕ ರಾಜು ಕಾಗೆ ಪುತ್ರಿ ಹಾಗೂ ಟೀಂ ಡೆಡ್ಲಿ ಅಟ್ಯಾಕ್ ಮಾಡಿದ ಘೋರ ಕೃತ್ಯ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಉಗಾರ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿತ್ತು. 
 
ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಅವರ ರೌಡಿ ಗ್ಯಾಂಗ್, ಫೇಸ್‌ಬುಕ್‌ನಲ್ಲಿ ಕಮೆಂಟ್ ಮಾಡಿದ್ದ ಕಾಂಗ್ರೆಸ್ ನಾಯಕ ವಿವೇಕ ಶೆಟ್ಟಿ ಮನೆಗೆ ನುಗ್ಗಿ ಮಹಿಳೆ ಮಕ್ಕಳು ಎನ್ನುವುದನ್ನು ನೋಡದೆ ಅಟ್ಟಹಾಸ ಮೆರೆದಿದ್ದು, ಈ ಭೀಭತ್ಸ ಕೃತ್ಯದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು.
 
ಶಾಸಕ ರಾಜು ಕಾಗೆ ಪುತ್ರಿ ಪ್ರತೀಕ್ಷಾ ಜೊತೆಗೆ 11 ಜನರ ರೌಡಿ ತಂಡ ಏಕಾಏಕಿ ಕಾಂಗ್ರೆಸ್ ನಾಯಕ ವಿವೇಕ ಶೆಟ್ಟಿ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ. ವಿವೇಕ ಶೆಟ್ಟಿಯನ್ನು ಗ್ರಾಮಸ್ಥರ ಎದುರೇ ರಸ್ತೆಗೆ ಎಳೆತಂದು ಕತ್ತು ಹಿಸುಕಿ ಕೊಲೆ ಮಾಡಲು ಸಹ ಯತ್ನಿಸಿದ್ದ ದೃಶ್ಯಗಳು ಸಹ ಸಿಸಿಟಿವಿಯಲ್ಲಿ ಸೆರೆಯಾಗಿದ್ದವು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments