ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರಕಾರದ ಸಚಿವ ಸಂಪುಟ ಪುನಾರಚನೆ ಹಾಗೂ ವಿಸ್ತರಣೆಗೆ ಮುಂದಾಗಿರುವ ಬೆನ್ನಲ್ಲೇ ಕೈ ಪಾಳೆಯದಲ್ಲಿ ಭಿನ್ನಮತ ಸ್ಪೋಟಗೊಂಡಿದೆ.
ಸಚಿವ ಸ್ಥಾನದ ಮೇಲೆ ಕಣ್ಣಿಟ್ಟು ಅವಕಾಶದಿಂದ ವಂಚಿತರಾಗಿರುವ ಕಾಂಗ್ರೆಸ್ ಶಾಸಕರಿಗೆ ಕಮಾಂಡ್ ಸಮಾಧಾನ ಮಾಡುವ ಕೆಲಸಕ್ಕೆ ಮುಂದಾಗಿದೆ.
ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಅವರ ಅಸಮಾಧಾನವನ್ನು ಕಡಿಮೆ ಮಾಡಲು ಅವರ ಪುತ್ರಿ ಸೌಮ್ಯಾರೆಡ್ಡಿಗೆ ಸಂಸದೀಯ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಹೆಚ್.ಕೆ ಪಾಟೀಲ್ ಅವರಿಗೆ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನ ನೀಡಲಾಗಿದೆ.
ಡಾ. ಕೆ. ಸುಧಾಕರ್ ಹಾಗೂ ಬಿ.ಸಿ.ಪಾಟೀಲ್ ಗೆ ನಿಗಮ ಮಂಡಳಿ ಪಕ್ಕಾ ಆದಂತಿದೆ.
ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆರ್. ಶಂಕರ್ ಕಾಂಗ್ರೆಸ್ ಹಿರಿಯ ನಾಯಕರ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಮೇಶ್ ಜಾರಕಿಹೊಳಿ ಕೂಡ ಮುಂದಿನ ನಡೆ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ.