Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನವದೆಹಲಿ : ಈ ಬಾರಿ ದೆಹಲಿ ಭೇಟಿ ಬಹಳ ಫಲಪ್ರದವಾಗಿದೆ. ಜಲಶಕ್ತಿ, ಇಂಧನ, ಪರಿಸರ, ಹಣಕಾಸು, ರಕ್ಷಣಾ ಸಚಿವರನ್ನು ಭೇಟಿ ಮಾಡಿದ್ದೇವೆ.
ಈ ವೇಳೆ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಗುರುವಾರ ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾ.ಜ.ಪ(ಭಾರತೀಯ ಜನತಾ ಪಕ್ಷ) ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಲು ನನಗೆ ಅವಕಾಶ ದೊರಕಿರುವುದು ಸಂತೋಷ ತಂದಿದೆ ಎಂದರು.
ಏಪ್ರಿಲ್ 16 ಮತ್ತು 17 ರಂದು ಭಾ.ಜ.ಪ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಚುನಾವಣೆಗೆ ಯಾವ ರೀತಿಯಲ್ಲಿ ಪೂರ್ವಭಾವಿ ತಯಾರಿಗಳನ್ನು ಮಾಡಿಕೊಳ್ಳಬೇಕೆಂದು ಪಕ್ಷಕ್ಕೆ ಹಾಗೂ ನನಗೆ ಭಾ.ಜ.ಪ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೂಚನೆಯನ್ನು ನೀಡಿದ್ದಾರೆ ಎಂದು ತಿಳಿಸಿದರು.