ಮುಂಬರುವ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮತಯಂತ್ರಗಳಿಗೆ ವಿವಿಪ್ಯಾಟ್ ಅಳವಡಿಸುವಂತೆ ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ಮನವಿ ಮಾಡಿದೆ.
ಕೆಪಿಸಿಸಿ ರಾಜ್ಯ ಘಟಕದ ಚಿಂತನೆಗೆ ಪಕ್ಷದ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ಕಾಂಗ್ರೆಸ್ ಮುಖಂಡರು ರಾಜ್ಯ ಚುನಾವಣೆ ಆಯೋಗದ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದ್ದಾರೆ.
ಮತಯಂತ್ರಗಳನ್ನು ತಿರುಚಬಹುದು ಎನ್ನುವ ಅನುಮಾನಗಳಿಂದ ತತ್ತರಗೊಂಡಿರುವ ಕಾಂಗ್ರೆಸ್, ಮತಯಂತ್ರಗಳಿಗೆ ಕಡ್ಡಾಯವಾಗಿ ವಿವಿಪ್ಯಾಟ್ ಅಳವಡಿಸುವಂತೆ ಕೇಂದ್ರ ಚುನಾವಣೆ ಆಯೋಗವನ್ನು ಒತ್ತಾಯಿಸಲಿದೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಉತ್ತರ ಭಾರತ ಮಾದರಿಯಲ್ಲಿ ಚುನಾವಣೆ ನಡೆಸಲಾಗುವುದು ಎಂದು ಹೇಳಿಕೆ ನೀಡಿರುವುದು ಕಾಂಗ್ರೆಸ್ ಮುಖಂಡರ ಆತಂಕಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.