Publish Date: Fri, 29 Sep 2023 (16:40 IST)
Updated Date: Fri, 29 Sep 2023 (16:42 IST)
ಬೆಂಗಳೂರಿನಲ್ಲಿ ವಿಭಿನ್ನವಾಗಿ ಬುರ್ಖಾ ಧರಿಸಿ ತಲೆಯ ಮೇಲೆ ಬಿಂದಿಗೆ ಹೊತ್ತುಕೊಂಡು ಸರ್ಕಾರದ ವಿರುದ್ಧ ಕಾವೇರಿ ನೀರು ಹರಿಸದಂತೆ ಪ್ರತಿಭಟನೆ ಮಾಡಿದ ವಾಟಾಳ್ ನಾಗರಾಜ್ ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತದೆ. ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವವರೆಗೂ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ. ಇಂದಿನ ಪ್ರತಿಭಟನೆಗೂ ಸರ್ಕಾರ ಬಗ್ಗದಿದ್ದರೆ ಅಕ್ಟೋಬರ್ 5 ರಂದು ಕೃಷ್ಣರಾಜ ಸಾಗರ ಕೆಆರ್‌ಎಸ್ ಆಣೆಕಟ್ಟೆಗೆ ಮುತ್ತಿಗೆ ಹಾಕಲಾಗುವುದು ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ.