ಅಂತರಾಜ್ಯ ಜಲವಿವಾದಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ರಾಷ್ಟ್ರದಲ್ಲಿ ನಿರ್ದಿಷ್ಟವಾದ ಜಲನೀತಿ ಇಲ್ಲ. ದೇಶಕ್ಕೆ ಸಮಗ್ರವಾದ ಜಲನೀತಿಯ ಅಗತ್ಯವಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವಾನ್ ಡಿಸೋಜಾ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರ ನೀರಿನ ವ್ಯಾಜ್ಯಗಳ ಇತ್ಯರ್ಥಕ್ಕಾಗಿ ಜಲನೀತಿಯನ್ನು ಜಾರಿಗೊಳಿಸಬೇಕು. ಸುಪ್ರೀಂ ಕೋರ್ಟ್ ಆದೇಶವು ಕೇವಲ ಕಾನೂನಿನ ಪರಧಿಯಲ್ಲಿ ಆಗಿದೆ. ತೀರ್ಪು ವಸ್ತುಸ್ಥಿತಿಯ ಪ್ರಲಿಫಲನವಲ್ಲ ಎಂದು ಹೇಳಿದರು.
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದ ವಿರುದ್ಧ ನ್ಯಾಯಾಲಯ ತೀರ್ಪು ನೀಡಿರುವುದು ನೋವಿನ ಸಂಗತಿ. ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಪಕ್ಷಗಳು ಹಾಗೂ ಸಚಿವ ಸಂಪುಟವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂವಿಧಾನವನ್ನು ಎತ್ತಿಹಿಡಿಯುವ ಕೆಲಸ ಮಾಡಿರುವುದು ಶ್ಲಾಂಘನೀಯ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವಾನ್ ಡಿಸೋಜಾ ಹೇಳಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ