Webdunia - Bharat's app for daily news and videos

Install App

ಮೋದಿಯವರಂಥ ನಾಯಕ ಸಿಕ್ಕಿರೋದು ನಮ್ಮ ಸೌಭಾಗ್ಯ : ಯಡಿಯೂರಪ್ಪ

Webdunia
ಸೋಮವಾರ, 8 ಮೇ 2023 (14:14 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಯವರಂಥ ನಾಯಕ ಸಿಕ್ಕಿರೋದು ನಮ್ಮ ಸೌಭಾಗ್ಯ. ಕೊರೊನಾ ಸಂದರ್ಭದಲ್ಲಿ ಪರಿಹಾರ ನೀಡಿದ್ದಾರೆ, ಆರೋಗ್ಯ ರಕ್ಷಿಸಿ ದೇಶ ರಕ್ಷಿಸಿದ್ದಾರೆ.
 
ದೇಶವು ಆರ್ಥಿಕ ಪ್ರಗತಿ ಆಗಿದೆ, ಜಗತ್ತಿನಲ್ಲೇ ನಮ್ಮ ದೇಶ ಆರ್ಥಿಕತೆಯಲ್ಲಿ ಐದನೇ ಸ್ಥಾನದಲ್ಲಿದೆ. ಮುಂದೆ ಒಂದನೇ ಸ್ಥಾನದಲ್ಲಿ ಬರೋದ್ರಲ್ಲಿ ಸಂಶಯ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.

ಖಾಸಗಿ ಹೊಟೇಲಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರದ ಅಗತ್ಯ ಇದೆ. ಮೋದಿಯವರಂಥ ಮುತ್ಸದ್ಧಿ ಪ್ರಧಾನಿ ನಾಯಕ ಈದೇಶದ ಅಭಿವೃದ್ಧಿ ಬಗ್ಗೆ ಹಗಲಿರುಳು ಚಿಂತೆ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಮೋದಿ, ಅಮಿತ್ ಶಾ, ನಡ್ಡಾ ಅವರು ವಿಶೇಷ ಪ್ರಯತ್ನ ಮಾಡುತ್ತಿದ್ದಾರೆ. ವಿದೇಶದಿಂದ ಬಂದ ನಂತರ ವಿಶ್ರಾಂತಿ ಇಲ್ಲದೇ ಮೋದಿಯವರು ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಜಾತಿ ಧರ್ಮದ ಎಲ್ಲೆ ಮೀರಿ ಬಸವತತ್ವದಂತೆ ಮೋದಿ ಆಡಳಿತ ಇದೆ. ಅವರ ಹೆಜ್ಜೆಗೆ ಹೆಜ್ಜೆ ಹಾಕುವ ಸರ್ಕಾರ ಕರ್ನಾಟಕದಲ್ಲಿ ಬೇಕಾಗಿದೆ. ರಾಜ್ಯದ ಅಭಿವೃದ್ಧಿ ಮುಖ್ಯ, ರೈತರು, ಮಕ್ಕಳು, ಮಹಿಳೆಯರು, ದುರ್ಬಲ ಸಬಲೀಕರಣಕ್ಕೆ ಮೋದಿಯವರ ಕೈ ಬಲಪಡಿಸಬೇಕಿದೆ. ರಾಜ್ಯದಲ್ಲಿ ಸಮಗ್ರ ಅಭಿವೃದ್ಧಿ ಆಗುತ್ತಿದೆ. ಮನೆಮನೆಗೂ ಶುದ್ಧ ಕುಡಿಯುವ ನೀರು, ಶೌಚಾಲಯಗಳ ನಿರ್ಮಾಣ ಆಗಿದೆ ಎಂದರು. 

ಮೋದಿ, ಅಮಿತ್ ಶಾ , ನಡ್ಡಾ ರಾಜ್ಯದ ಉದ್ದಗಲ ಓಡಾಡಿದ್ದಾರೆ. ಪ್ರಧಾನಿಯವರು ರೋಡ್ ಶೋ ಮಾಡಿದ್ದಾರೆ. ರಾಜ್ಯದ ನಾಡಿಮಿಡಿತ ಅರ್ಥ ಮಾಡಿಕೊಂಡಿದ್ದಾರೆ. ಈ ಸಲ 130-135 ಸೀಟ್ ಗೆಲ್ಲೋದು ನಿಶ್ಚಿತ. 2008 ರಲ್ಲಿ 110, 2018 ರಲ್ಲಿ 104 ಗೆದ್ದಿದ್ದೇವೆ. ಸೂರ್ಯ ಚಂದ್ರರಷ್ಟೇ ಸತ್ಯ ನಾವು ಅಧಿಕಾರಕ್ಕೆ ಬರೋದು. ಮೀಸಲಾತಿ ಹೆಚ್ಚಳ ಮಾಡಿದ್ದೇವೆ. 80% ಭಾಗ ಎಸ್ಸಿ, ಎಸ್ಟಿ ಸಮುದಾಯದವರು ಬಿಜೆಪಿ ಬೆಂಬಲಿಸುತ್ತಾರೆ ಎಂದು ತಿಳಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments