ಬೆಂಗಳೂರು : ಮೈತ್ರಿ ಸರ್ಕಾರ ಪತನವಾದ ಬೆನ್ನಲೇ ಕಾಂಗ್ರೆಸ್ ಬಂಡಾಯ ಶಾಸಕ ಶಿವರಾಮ್ ಹೆಬ್ಬಾರ್ ಮುಂಬೈನಿಂದ ವಾಪಸ್ಸಾಗಿದ್ದಾರೆ.
ತುರ್ತು ಕೆಲಸ ನಿಮಿತ್ತ ಕ್ಷೇತ್ರಕ್ಕೆ ಆಗಮಿಸಿದ್ದ ಶಿವರಾಮ್ ಹೆಬ್ಬಾರ್ ಅವರು ಬಿಜೆಪಿ ಸೇರುವ ಕುರಿತು ಕುಟುಂಬದವರೊಂದಿಗೆ ಹಾಗೂ ಆಪ್ತರೊಂದಿಗೆ ಚರ್ಚೆ ನಡೆಸಿದ್ದು, ಬಳಿಕ ರಾತ್ರೋ ರಾತ್ರಿ ಮತ್ತೆ ಮುಂಬೈಗೆ ಮರಳಿದ್ದಾರೆ ಎನ್ನಲಾಗಿದೆ.
ಇದೀಗ ಮಾಧ್ಯಮವೊಂದರಲ್ಲಿ ಮಾತನಾಡಿದ ಅವರು, ನಾವು ಅತೃಪ್ತ ಶಾಸಕರಲ್ಲ, ಅಸಹಾಯಕರು. ನಮ್ಮ ಸಹಾಯಕ್ಕೆ ಯಾರೂ ಬರದೇ ಹೋದ ಹಿನ್ನಲೆ ನಾವು ರಾಜೀನಾಮೆ ನೀಡುವ ತೀರ್ಮಾನಕ್ಕೆ ಬಂದೆವು. ಅನರ್ಹತೆಯ ಬಗ್ಗೆ ನಮಗೆ ಯಾವುದೇ ಭಯ ಇಲ್ಲ. ನಮ್ಮ ರಾಜೀನಾಮೆ ಅಂಗೀಕಾರವಾಗುವ ವಿಶ್ವಾಸ ಇದೆ. ಅತೃಪ್ತ ಶಾಸಕರಲ್ಲಿ ಒಗ್ಗಟ್ಟಿದೆ. ಯಾವುದೇ ಬದಲಾವಣೆ ಇಲ್ಲ. 3-4 ದಿನಗಳ ಒಳಗೆ ಸಮಸ್ಯೆ ಬಗೆಹರಿಯಲಿದೆ. ಸ್ಪೀಕರ್, ಸುಪ್ರೀಂಕೋರ್ಟ್ ಮೇಲೆ ನಮಗೆ ನಂಬಿಕೆ ಇದೆ. ನಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ.