ನಮಗೊಂದು ಅಗ್ನಿಕುಂಡವನ್ನು ಮಾಡಿಕೊಡಿ. ಸೀತೆಯಂತೆ ನಾವು ಅಗ್ನಿ ಕುಂಡವನ್ನು ಪ್ರವೇಶಿಸಲು ಸಿದ್ದ. ನಮ್ಮ ವಿರುದ್ಧ ನಿರಂತರ ಸುಳ್ಳು ಆರೋಪಗಳನ್ನು ಬಿಜೆಪಿ ಮಾಡುತ್ತಿದೆ ಎಂದು ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ತಿರುಗೇಟು ನೀಡಿದ್ದಾರೆ.
ಸಿಎಂ ಕುಟುಂಬಕ್ಕೆ ಕಿಕ್ ಬ್ಯಾಕ್ ಹಣ ಹೋಗಿದೆ ಎಂದು ಬಿಜೆಪಿ ಆರೋಪಿಸುತ್ತಿದೆ. ಬಿಜೆಪಿಯ ಸುಳ್ಳು ಆರೋಪಗಳನ್ನು ಸಹಿಸಿಕೊಳ್ಳಲು ಸಾದ್ಯವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಟೀಲ್ ಬ್ರಿಡ್ಜ್ ಯೋಜನೆಯಲ್ಲಿ 65 ಕೋಟಿ ರೂಪಾಯಿ ಸಿಎಂ ಕುಟುಂಬಕ್ಕೆ ಹೋಗಿದೆ ಎನ್ನುವ ಯಡಿಯೂರಪ್ಪ ಆರೋಪಕ್ಕೆ ಯಾವುದೇ ಆಧಾರವಿಲ್ಲ ಎಂದು ತಿಳಿಸಿದ್ದಾರೆ.
ವಿಪಕ್ಷದ ಸುಳ್ಳು ಆರೋಪಗಳಿಂದ ನೊಂದು ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ಕೈಬಿಡುತ್ತಿದ್ದೇವೆ ಎಂದು ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.