ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಮನವೊಲಿಸಲು ಕಾಂಗ್ರೆಸ್ ಹೈಕಮಾಂಡ್ ಮಾತುಕತೆ ನಡೆಸುತ್ತಿದ್ದು, ನಾನು ಸಹ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಎಂ.ಕೃಷ್ಣ ರಾಜೀನಾಮೆಯಿಂದ ಉಪಚುನಾವಣೆ ಹಾಗೂ ಮುಂಬರುವ ವಿಧಾನಸಭೆ ಚುನಾವಣೆಯ ಮೇಲೆ ಯಾವ ಪರಿಣಾಮ ಬೀರಲಿದೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ ಎಂದರು.
ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಲೆಕ್ಕಾಚಾರ ತಪ್ಪುತ್ತಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಅವರು ಯಾವ ಅಭಿಪ್ರಾಯದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಪಕ್ಷದಲ್ಲಿ ಯಾರನ್ನು ನಿರ್ಲಕ್ಷ ಮಾಡುತ್ತಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಅನಿವಾರ್ಯವೇ ಅಲ್ಲ ಎಂದು ಹೇಳಲ್ಲ ಪಕ್ಷಕ್ಕೆ ಎಲ್ಲರೂ ಬೇಕು. ಕಾಂಗ್ರೆಸ್ ಪಕ್ಷ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಅಭಿವೃದ್ಧಿಯತ್ತ ಸಾಗುವ ಪಕ್ಷ ಎಂದು ತಿಳಿಸಿದರು.
ಕೇಂದ್ರ ಸರಕಾರ ಮಂಡಿಸಿರುವ ಬಜೆಟ್ ಕುರಿತು ಸಂಪೂರ್ಣ ಮಾಹಿತಿ ಇಲ್ಲ. ಮಾಹಿತಿ ಪಡೆದುಕೊಂಡು ಪ್ರತಿಕ್ರಿಯೆ ನೀಡುತ್ತೇನೆ. ರಾಜ್ಯ ಸರಕಾರದ ಬಜೆಟ್ ಮಾರ್ಚ್ ತಿಂಗಳ ಎರಡನೇ ವಾರದಲ್ಲಿ ನಡೆಯಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ