ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಅಧಿಕಾರದಲ್ಲಿದ್ದಾಗ ವಿಪಕ್ಷದಲ್ಲಿದ್ದ ಬಿಜೆಪಿ, ಸಿಬಿಐ ಪ್ರಾಮಾಣಿಕತೆಯನ್ನು ಪ್ರಶ್ನಿಸಿತ್ತು. ಆದರೆ. ನಾವು ಅವರಂತೆ ಸಿಬಿಐ ಪ್ರಾಮಾಣಿಕತೆಯನ್ನು ಪ್ರಶ್ನಿಸುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಬಳ್ಳಾರಿಯಲ್ಲಿ ಸಮಾವೇಶದ ನಂತರ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆಯ ಪ್ರಕರಣವನ್ನು ಸಿಬಿಐಗೆ ಕೊಡಲು ಯಾವುದೇ ಅಭ್ಯಂತರವಿಲ್ಲ ಎಂದರು
ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣ ಸೇರಿದಂತೆ ಅನೇಕ ಪ್ರಕರಣಗಳನ್ನು ಸಿಬಿಐ ತನಿಖೆ ಮಾಡುತ್ತಿದ್ದರೂ ಪ್ರಗತಿಯಾಗಿಲ್ಲ. ಪ್ರಕರಣ ಸಿಬಿಐಗೆ ಕೊಡಲು ಸರಕಾರ ಸಿದ್ದವಿದೆ. ಆದರೆ, ಗೌರಿ ಕುಟುಂಬದವರು ಸಿಬಿಐ ತನಿಖೆಗೆ ಕೋರಿಲ್ಲ ಎಂದರು.
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ ನಡೆಸುತ್ತಿದೆ. ತನಿಖೆ ಅಂತಿಮ ಘಟ್ಟದಲ್ಲಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.