Webdunia - Bharat's app for daily news and videos

Install App

ಕಾಂಗ್ರೆಸ್ ನವರು ಕಳ್ಳ ನಾನಲ್ಲ ಎನ್ನುವುದನ್ನು ನೋಡಿದರೇ ಅನುಮಾನ: ಆರ್ ಅಶೋಕ್

Krishnaveni K
ಶುಕ್ರವಾರ, 9 ಆಗಸ್ಟ್ 2024 (14:55 IST)
ಬೆಂಗಳೂರು: ಕಾಂಗ್ರೆಸ್ಸೇ ವಿಪಕ್ಷವಾಗಿ ಬೀದಿಗಿಳಿದು ‘ನಾನು ಕಳ್ಳ ಅಲ್ಲ; ನಾನು ಕಳ್ಳ ಅಲ್ಲ, ನನ್ನ ನಂಬಿರಿ’ ಎಂದು ಹೇಳುವುದನ್ನು ಗಮನಿಸಿದರೆ, ಕಾಂಗ್ರೆಸ್ ಪಕ್ಷವು ವಿಪಕ್ಷವಾಗಲು ತಯಾರಿ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಿಳಿಸಿದರು.

ಮಂಡ್ಯದ ಪ್ರೆಸ್ ಕ್ಲಬ್ ನಲ್ಲಿ ಕಾಂಗ್ರೆಸ್ ಹಗರಣಗಳ ಸರ್ಕಾರದ ಕುರಿತು ಪುಸ್ತಕ ಬಿಡುಗಡೆ ಮಾಡಿ, ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಆಡಳಿತ ಪಕ್ಷವಾದ ಕಾಂಗ್ರೆಸ್ ಪಕ್ಷವು ದಾಖಲೆಗಳನ್ನು ಕೊಟ್ಟು ಸರಕಾರ ಸ್ವಚ್ಛ, ಪಾರದರ್ಶಕ ಎಂದು ವಿಧಾನಸಭೆ ಒಳಗೆ ಹೇಳಬೇಕಿತ್ತು ಎಂದು ಹೇಳಿದರು. ಕಾಂಗ್ರೆಸ್, ವಿಪಕ್ಷವಾಗಲು ಕೆಲಸ ಮಾಡಲು ಪೀಠಿಕೆ ಹಾಕಿ ಹೊರಡುತ್ತಿದೆ ಎಂದು ಟೀಕಿಸಿದರು.

ವಿಪಕ್ಷವಾಗಿ ನಾವು ಹೋರಾಟ ಮಾಡುತ್ತಿದ್ದೇವೆ; ಕಾಂಗ್ರೆಸ್ ಪಕ್ಷ ಆಡಳಿತ ಪಕ್ಷವಾಗಿ ಹಾರಾಟ ಮಾಡುತ್ತಿದೆ ಎಂದು ಆಕ್ಷೇಪಿಸಿದ ಅವರು, ಮಂತ್ರಿಗಳಿಗೆ ಇನ್ ಚಾರ್ಜ್ ಕೊಟ್ಟು ಸಭೆಗಳನ್ನು ಮಾಡಿ, ನಾವು ಬಿಜೆಪಿ ಭ್ರಷ್ಟಾಚಾರಗಳನ್ನು ಬಯಲಿಗೆ ತರುತ್ತೇವೆ; ಕೇಂದ್ರ ನೀಡುವ ಅನುದಾನದಲ್ಲಿ ತಾರತಮ್ಯ ಆಗಿದೆ. ಅದರ ಬಗ್ಗೆ ನಾವು ಸಮಾವೇಶ ಮಾಡುತ್ತಿದ್ದೇವೆ ಎಂದು ಕಾಂಗ್ರೆಸ್ಸಿನವರು ನಾಟಕ ಆಡುತ್ತಿದ್ದಾರೆ ಎಂದು ದೂರಿದರು.

ಕೇಂದ್ರದ ಅನುದಾನ ಬಾರದಿದ್ದರೆ ಪ್ರಜಾಪ್ರಭುತ್ವದ ರೀತಿಯಲ್ಲಿ ಮಾತನಾಡಬೇಕಿತ್ತು. ನಮ್ಮ ರಾಜ್ಯದ ಸಂಸದರಾದ ಮಲ್ಲಿಕಾರ್ಜುನ ಖರ್ಗೆ ಜೀ ಯವರು ವಿಪಕ್ಷ ನಾಯಕರು; ಅವರು ತಾರತಮ್ಯ ಆಗಿದೆ ಎಂದು ಸಂಸತ್ತಿನಲ್ಲಿ ಒಂದು ದಿನವೂ ಮಾತನಾಡಿಲ್ಲ. ಇಲ್ಲಿ ರಾಜಕೀಯದ ಬೇಳೆ ಬೇಯಿಸಲು ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಸ್ವತಃ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿಗೆ ಬಂದು ಕಾಂಗ್ರೆಸ್ಸಿನವರ ಮುಖಕ್ಕೆ ಮಂಗಳಾರತಿ ಎತ್ತಿ ಹೋಗಿದ್ದಾರೆ. ಡಾ. ಮನಮೋಹನ್ ಸಿಂಗ್ ಅವರ ಸರಕಾರ 10 ವರ್ಷ ಇತ್ತು. ಅದೇರೀತಿ ನರೇಂದ್ರ ಮೋದಿಯವರ ಸರಕಾರ 10 ವರ್ಷ ಇತ್ತು. ಅಂಕಿ ಅಂಶಗಳೊAದಿಗೆ ಹೋಲಿಸಿ ಅನುದಾನ, ಸಹಾಯದ ವಿವರ ನೀಡಿದ್ದಾರೆ. ಯಾವುದರಲ್ಲೂ ಕಡಿಮೆ ಮಾಡಿಲ್ಲ; ನಾನೇ ಹಿಂದೆ ಕಂದಾಯ ಸಚಿವನಾಗಿದ್ದೆ. ಡಾ. ಮನಮೋಹನ್ ಸಿಂಗ್ ಅವರ ಸರಕಾರ ಕೊಟ್ಟ ಮೊತ್ತದಿಂದ 5 ಪಟ್ಟು ಜಾಸ್ತಿ ಮೋದಿಯವರ ಸರಕಾರ ಕೊಟ್ಟಿದೆ ಎಂದು ತಿಳಿಸಿದರು.
 
ಪಾದಯಾತ್ರೆ ಅಂತಿಮ ಘಟ್ಟಕ್ಕೆ
ಪಾದಯಾತ್ರೆಯ ಅಂತಿಮ ಘಟ್ಟಕ್ಕೆ ತಲುಪಿದ್ದೇವೆ. ಇವತ್ತು ಸಂಜೆ ಮೈಸೂರು ಗಡಿಭಾಗ ತಲುಪಿ ನಾಳೆ ಬೆಳಿಗ್ಗೆ ಆರೇಳು ಕಿಮೀ ಪಾದಯಾತ್ರೆಯ ಬಳಿಕ ಮೈಸೂರಲ್ಲಿ ಬೃಹತ್ ಸಮಾವೇಶ ನಡೆಯಲಿದೆ ಎಂದು ಆರ್. ಅಶೋಕ್ ಅವರು ವಿವರಿಸಿದರು.

ಜನರು ನಮ್ಮನ್ನು ವಿಪಕ್ಷವಾಗಿ ಆಯ್ಕೆ ಮಾಡಿದ್ದಾರೆ. ಸರಕಾರ ಮಾಡುವ ತಪ್ಪುಗಳನ್ನು ಜನರ ಮುಂದಿಡುವುದು, ಜನರಿಗೆ ತಿಳಿಸುವುದು ನಮ್ಮ ಕರ್ತವ್ಯ. ಅವರ ಭ್ರಷ್ಟಾಚಾರ, ಅವ್ಯವಹಾರ, ಸ್ವಜನ ಪಕ್ಷಪಾತ- ಇವೆಲ್ಲವನ್ನೂ ತಿಳಿಸುವುದು, ಹೋರಾಟ ಮಾಡುವುದು ನಮ್ಮ ಹಕ್ಕು ಎಂದು ಪ್ರತಿಪಾದಿಸಿದರು.
 
ಕಾನೂನು ಪ್ರಕಾರ, ನಿಯಮ ಪ್ರಕಾರ ಸಿದ್ದರಾಮಯ್ಯನವರು ನಿವೇಶನ ಪಡೆದಿದ್ದರೆ 2014ರಲ್ಲಿ ಕಡತ ಬಂದಾಗ ಯಾಕೆ ತಿರಸ್ಕರಿಸಿದ್ದರು?- ಇದು ಬಿಜೆಪಿ ಪ್ರಶ್ನೆ ಎಂದರು. 10 ವರ್ಷ ಅದಕ್ಕಾಗಿ ಕಾಯಬೇಕಿತ್ತೇ ಎಂದು ಕೇಳಿದರು. ಅನ್ಯಾಯ ಇದ್ದ ಕಾರಣ ನೀವು ಆಗ ಸಹಿ ಹಾಕಿಲ್ಲ ಅಲ್ಲವೇ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಈ ಆಪಾದನೆಗೆ ಅವರಲ್ಲಿ ಉತ್ತರ ಇಲ್ಲ ಎಂದು ತಿಳಿಸಿದರು.

ಅಣ್ಣ ಡಿ.ಕೆ.ಶಿವಕುಮಾರಣ್ಣ, ಸಿದ್ರಾಮಣ್ಣ, ನೀವು ವಾಲ್ಮೀಕಿ ನಿಗಮದ ಹಗರಣ, ಮೂಡ ಹಗರಣ ಮಾಡಿದ್ದೀರಿ. 25 ಸಾವಿರ ಕೋಟಿ ಟಿಎಸ್‌ಪಿ ದಲಿತರ ಉದ್ಧಾರಕ್ಕೆ ಸೇರಬೇಕಾದ ಹಣವನ್ನು ಗ್ಯಾರಂಟಿ ಕೊಡಲು ಬಳಸಿದ್ದೀರಿ. ಇದಕ್ಕೆ ದಲಿತರ ಹಣವೇ ಇವರಿಗೆ ಬೇಕಾಗಿತ್ತು. ಈ ಕುರಿತು ದಾಖಲೆ ಬಿಡುಗಡೆ ಮಾಡಿದ್ದೇವೆ ಎಂದು ಗಮನ ಸೆಳೆದರು.
 
ಯಾರು ನಿಮ್ಮ ಕೈ ಕಟ್ಟಿ ಹಾಕಿದ್ದರು..
ಬೇರೆ ಜಾತಿಗಳವರ ಹಣವನ್ನು ಇವರು ಮುಟ್ಟಿಲ್ಲ; ಯಾರೂ ಕೇಳೋರಿಲ್ಲ; ಹೇಳೋರಿಲ್ಲವೆಂದು ದಲಿತರದೇ ಹಣ ವರ್ಗಾವಣೆ ಮಾಡಿದ್ದಾರೆ. ಇದೆಲ್ಲ ವಿವರವನ್ನೂ ನಾವು ಬಿಡುಗಡೆ ಮಾಡಿದ್ದೇವೆ ಎಂದ ಅವರು, ಬೊಮ್ಮಾಯಿ, ನಮ್ಮ ಮೇಲೆ ಇದ್ದ ಆರೋಪಗಳ ದಾಖಲೆಗಳನ್ನು ಆಗ ಬಿಡುಗಡೆ ಮಾಡಬೇಕಿತ್ತು. ಯಾರು ನಿಮ್ಮ ಕೈ ಕಟ್ಟಿ ಹಾಕಿದ್ದರು ಎಂದು ಆರ್. ಅಶೋಕ್ ಅವರು ಪ್ರಶ್ನೆಯನ್ನು ಮುಂದಿಟ್ಟರು.
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments