Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ನಾವು ಯಾವುದೇ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಂಡಿಲ್ಲ. ಅವರಿಗೆ ಪ್ರೋತ್ಸಾಹವನ್ನೂ ನೀಡಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
ಬಿಜೆಪಿ ನಾಯಕರು ಇತ್ತೀಚೆಗೆ ರೌಡಿಗಳ ಸಹವಾಸ ಮಾಡುತ್ತಿರುವ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಸಚಿವ ವಿ. ಸೋಮಣ್ಣ ಅವರ ಮನೆಗೆ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ, ನಾವು ಯಾವುದೇ ರೌಡಿಗಳನ್ನೂ ಪ್ರೋತ್ಸಾಹ ಮಾಡಲ್ಲ.
ಅವರಿಗೆ ಯಾವುದೇ ಅವಕಾಶಗಳನ್ನೂ ಕೊಡುವುದಿಲ್ಲ. ಇದರ ಬಗ್ಗೆ ನಾನು ಹೆಚ್ಚು ಮಾತನಾಡಲು ಹೋಗಲ್ಲ. ಇದು ಬಹಳ ಸ್ಪಷ್ಟವಾಗಿದ್ದು, ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ.