ಜೆಡಿಎಸ್ ಪಕ್ಷಕ್ಕೆ ನಾವು ಬೇಡವಾಗಿದ್ದೇವೆ. ಹೀಗಾಗಿ ಎನ್ಸಿಪಿ ಪಕ್ಷ ಸೇರಲು ಆಲೋಚನೆ ನಡೆಸಿದ್ದೇವೆ ಎಂದು ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಲೂ ನಾವು ಜೆಡಿಎಸ್ ಪಕ್ಷದಲ್ಲಿಯೇ ಇದ್ದೇವೆ. ಆದರೆ, ಪಕ್ಷ ಬೇಡವೆಂದರೆ ನಾವೇನು ಮಾಡುವುದು ಎಂದು ಪ್ರಶ್ನಿಸಿದರು.
ಜನವರಿ 8ರಂದು ಶರದ್ ಪವಾರ್ ಬೆಂಗಳೂರಿಗೆ ಬರುತ್ತಿದ್ದಾರೆ. ಈ ವೇಳೆ ಎನ್ಸಿಪಿ ಪಕ್ಷ ಸೇರುವ ಕುರಿತು ಚರ್ಚೆ ನಡೆಸುತ್ತೇವೆ. ನನ್ನ ಜೊತೆ 7 ಶಾಸಕರಿದ್ದಾರೆ ಎಂದು ಹೇಳಿದರು.
ಜೆಡಿಎಸ್ ಪಕ್ಷದ ಐವರು ಬಂಡಾಯ ಶಾಸಕರಾದ ಜಮೀರ್ ಅಹ್ಮದ್, ಶ್ರೀನಿವಾಸ್, ಚೆಲುವರಾಯ ಸ್ವಾಮಿ, ಬಾಲಕೃಷ್ಣ ಮತ್ತು ಇಕ್ಬಾಲ್ ಅನ್ಸಾರಿ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೂರನೇಯ ಅಭ್ಯರ್ಥಿ ಬೆಂಬಲಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ