ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಲ್ಲಿ ನಾವು ಕೂಡಾ ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಉತ್ತರಪ್ರದೇಶದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರಕಾರ ರೈತರ ಸಾಲ ಮನ್ನಾ ಮಾಡಿ ಚುನಾವಣೆಯಲ್ಲಿ ಕೊಟ್ಟ ಭರವಸೆಯನ್ನು ಈಡೇರಿಸಿದೆ ಎಂದರು.
ಉತ್ತರಪ್ರದೇಶದಲ್ಲಿ ರಾಜ್ಯ ಸರಕಾರ ರೈತರ 1 ಲಕ್ಷದವರೆಗಿನ ಸಾಲವನ್ನು ಮನ್ನಾ ಮಾಡಿದೆ. ಇದರಲ್ಲಿ ಕೇಂದ್ರದ ಯಾವುದೇ ಪಾಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯ ಸರಕಾರ ರೈತರ ಸಾಲವನ್ನು ಮನ್ನಾ ಮಾಡುವುದು ಬಿಟ್ಟು ಅನಗತ್ಯವಾಗಿ ಕೇಂದ್ರದತ್ತ ಬೊಟ್ಟು ಮಾಡುತ್ತಿದೆ. ಮೊದಲು ರೈತರ ಸಾಲವನ್ನು ಮನ್ನಾ ಮಾಡಲಿ ಎಂದು ಆಗ್ರಹಿಸಿದರು.
ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ. ಉಪಚುನಾವಣೆ ಫಲಿತಾಂಶ ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.