ರಾಜ್ಯ ಸರಕಾರದ ರೈತರ ಸಾಲ ಮನ್ನಾ ನಿರ್ಧಾರ ಸ್ವಾಗತಾರ್ಹ ಎಂದು ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ದೇಶದ ಇತರ ರಾಜ್ಯಗಳಲ್ಲಿ ರಾಜ್ಯ ಸರಕಾರಗಳು 1-2 ಲಕ್ಷ ರೂಪಾಯಿಗಳವರೆಗೆ ರೈತರ ಸಾಲ ಮನ್ನಾ ಮಾಡಲಾಗಿದೆ. ಆದರೆ, ಸಿಎಂ ಸಿದ್ದರಾಮಯ್ಯನವರು 50 ಸಾವಿರ ರೂಪಾಯಿ ಸಾಲ ಮನ್ನಾ ಮಾಡಿದ್ದಾರೆ. ಸಾಲದ ಮಿತಿ ಹೆಚ್ಚಿಸಿದರೆ ಸೂಕ್ತವಾಗುತ್ತದೆ ಎಂದರು.
ಕಳೆದ ಮೂರು ವರ್ಷಗಳಿಂದ ರೈತರು ಸಂಕಷ್ಟದ ಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಸಾಲ ಮನ್ನಾದಿಂದ ರೈತರ ಎಲ್ಲಾ ಕಷ್ಟಗಳು ದೂರವಾಗುವುದಿಲ್ಲ. ಕೇಂದ್ರ ಸರಕಾರ ಕೂಡಾ ರೈತರ ಸಾಲ ಮನ್ನಾ ಮಾಡಲಿ ಎಂದು ಒತ್ತಾಯಿಸಿದರು.
ಇದೀಗ ರಾಜ್ಯ ಸರಕಾರ ರೈತರ ಸಾಲ ಮನ್ನಾ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೂಡಾ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಿ ರೈತರ ಸಾಲ ಮನ್ನಾ ಮಾಡಿಸುವುದು ಸೂಕ್ತ ಎಂದು
ಆರ್‌ಬಿಐ ಗವರ್ನರ್ ಉರ್ಜಿತ್ ಪಟೇಲ್ ವಿರುದ್ಧ ಕೆಂಡ ಕಾರಿದ ಕುಮಾರಸ್ವಾಮಿ, ಕೈಗಾರಿಕೋದ್ಯಮಿಗಳ ಸಾವಿರಾರು ಕೋಟಿ ರೂಪಾಯಿಗಳ ಸಾಲ ಮನ್ನಾ ಮಾಡಿದರೆ ಬ್ಯಾಂಕ್‌ಗಳು ದಿವಾಳಿಯಾಗುವುದಿಲ್ಲವೇ? ರೈತರ ಸಾಲ ಮನ್ನಾ ಮಾಡಿದರೆ ಮಾತ್ರ ಬ್ಯಾಂಕ್‌ಗಳು ದಿವಾಳಿಯಗುತ್ತವೆಯೇ ಎಂದು ವಾಗ್ದಾಳಿ ನಡೆಸಿದ್ದಾರೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.