Publish Date: Mon, 30 Oct 2023 (18:48 IST)
Updated Date: Mon, 30 Oct 2023 (19:20 IST)
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು ನೀಡುವ ಜಾತಿ ಗಣತಿ ವರದಿಯನ್ನು ಸರ್ಕಾರ ಸ್ವೀಕರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮಾದ್ಯಮದೊಂದಿಗೆ ಮಾತನಾಡಿ ಅವರು ಪ್ರತಿ ಜಾತಿಯ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ತಿಳಿಯುವ ಉದ್ದೇಶದಿಂದ ಗಣತಿ ಮಾಡಿಸಿದ್ದೆ. ಆದರೆ ನಂತರ ಬಂದ ಸರ್ಕಾರಗಳು ವರದಿಯನ್ನು ಸ್ವೀಕರಿಸಿರಲಿಲ್ಲ. ಈಗ ಜಯಪ್ರಕಾಶ್ ಹೆಗ್ಡೆ ಅವರು ಜಾತಿ ಗಣತಿ ವರದಿ ನೀಡುತ್ತಾರೆ. ಸರ್ಕಾರ ಅದನ್ನು ಸ್ವೀಕರಿಸಲಿದೆ ಎಂದರು.