Publish Date: Sat, 03 Jun 2023 (16:29 IST)
Updated Date: Sat, 03 Jun 2023 (14:31 IST)
ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆ ಕನ್ನಡಿಗರ ರಕ್ಷಣೆಗೆ ನೆರವು ನೀಡುವಂತೆ ಸೂಚನೆ ಕೊಟ್ಟಿದ್ದೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸುವಂತೆ ಹಾಗೂ ಅವರಿಗೆ ಅಗತ್ಯ ನೆರವನ್ನು ನೀಡುವಂತೆ ಸಚಿವ ಸಂತೋಷ್ ಲಾಡ್ ಅವರಿಗೆ ಸೂಚಿಸಿದ್ದೇನೆ.ಘಟನೆಯಲ್ಲಿ ಗಾಯಗೊಂಡ ಅಥವಾ ಇತರೆ ಯಾವುದೇ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರ ರಕ್ಷಣೆಗೆ ನಾವು ಬದ್ಧರಿದ್ದೇವೆ.ಪ್ರತಿಯೊಬ್ಬ ಕನ್ನಡಿಗನನ್ನು ನಾವು ಸುರಕ್ಷಿತವಾಗಿ ನಾಡಿಗೆ ಕರೆ ತರುತ್ತೇವೆ ಎಂದು ಟ್ವೀಟ್ ಮೂಲಕ ಮಾಹಿತಿಯನ್ನ ಸಿಎಂ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ.