Publish Date: Tue, 30 May 2023 (17:26 IST)
Updated Date: Tue, 30 May 2023 (17:13 IST)
ಕೋವಿಡ್ ಸಂದರ್ಭದಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ವರದಿ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವರದಿ ಕೇಳಿದ್ದಾರೆ. ಇಂದು ನಡೆದ ಅಧಿಕಾರಿಗಳ ಸಭೆಯಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಮತ್ತೊಂದು ಸಭೆಯಲ್ಲಿ ಸಂಪೂರ್ಣ ವರದಿ ನೀಡಬೇಕು ಎಂದು ತಿಳಿಸಿದ್ದಾರೆ. ವರದಿ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದೇ ವೇಳೆ ಕೋವಿಡ್ ವೇಳೆ ಚಾಮರಾಜನಗರದ ಆಕ್ಸಿಜನ್ ದುರಂತ ಪ್ರಕರಣದ ತನಿಖೆಗೆ ಮತ್ತೆ ಮರುಜೀವ ನೀಡಿದ್ದು, ಈ ಬಗ್ಗೆಯೂ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.