ರಾಯಣ್ಣ ಬ್ರಿಗೇಡ್ ಬಗ್ಗೆ ಪಕ್ಷದ ವೇದಿಕೆಯಲ್ಲಿಯೇ ಚರ್ಚಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆಯಬಾರದಿತ್ತು. ಪಕ್ಷದಲ್ಲಿ ಕೆಲವರಿಗೆ ಅಸಮಾಧಾನ ಇದೆ. ಹೀಗಾಗೆ ನಾಳೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಭಿನ್ನಮತಿಯರ ಕುರಿತು ಚರ್ಚಿಸಲಾಗುತ್ತದೆ ಎಂದರು.
ಎತ್ತಿನ ಹೊಳೆ ಯೋಜನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ವೈಜ್ಞಾನಿಕ ವರದಿ ತರಿಸಿಕೊಂಡು ರಾಜ್ಯ ಸರಕಾರ ಮುಂದಿನ ಹೆಚ್ಚಿ ಇಡಬೇಕು ಎಂದು ಆಗ್ರಹಿಸಿದರು.
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ