Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬಿಜೆಪಿಯ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಅಬಕಾರಿ ಸಚಿವ ಕೆ ಗೋಪಾಲಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ.
ಪಕ್ಷ ನಮಗೆ ಎಲ್ಲವನ್ನೂ ಕೊಟ್ಟಿದ್ದು, ಹೀಗಿರುವಾಗ ನಾವು ಯಾಕೆ ಬಿಜೆಪಿ ಬಿಟ್ಟು ಹೋಗಬೇಕು. ಬಿಜೆಪಿ ಒಂದು ರಾಷ್ಟ್ರೀಯ ಪಕ್ಷ. ಕೊರೊನಾ ಮಧ್ಯೆಯೂ ನಾವೆಲ್ಲ ಕೆಲಸ ಮಾಡಿದ್ದೇವೆ. ಇನ್ನೂ ಕಾಂಗ್ರೆಸ್ ಅವರು ಸುಖಾ ಸುಮ್ಮನೇ ಏನೇನೋ ಹೇಳುತ್ತಿದ್ದಾರೆ ಅವರ ಹೇಳಿಕೆಯಂತೆ ಯಾರು ಕಾಂಗ್ರೆಸ್ ಗೆ ಹೋಗುವುದಿಲ್ಲ ಎಂದು ಹೇಳಿದರು. ಇನ್ನೂ ಸಿಎಂ ಬಸವರಾಜ್ ಬೊಮ್ಮಾಯಿ ನಾಯಕತ್ವದಲ್ಲೇ ಚುನಾವಣೆ ಎದುರಿಸಲಿದ್ದು, ಮತ್ತೆ ಪಕ್ಷ ಅಧಿಕಾರಕ್ಕೆ ಬರಲಿದೆ ಸಚಿವ ಗೋಪಾಲಯ್ಯ ಹೇಳಿಕೆ ನೀಡಿದ್ದಾರೆ