ಬರ ಅಧ್ಯಯನ ತಂಡದಿಂದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಕೊಕ್ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಯಾವುದೇ ಕಾರಣಕ್ಕೂ ಪಕ್ಷ ವಿರೋಧಿ ಚಟುವಟಿಕೆಗಳನ್ನು ಸಹಿಸುವುದಿಲ್ಲ ಎಂದು ತಮ್ಮ ಮುನಿಸನ್ನು ಹೊರ ಹಾಕಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಸ್ವತಂತ್ರವಾಗಿ ಬರ ಅಧ್ಯಯನ ನಡೆಸುತ್ತಿದ್ದಾರೆ. ಅದಕ್ಕೆ ನಮ್ಮ ವಿರೋಧ ಇಲ್ಲ. ಅವರು ನಮಗಿಂತ ಹೆಚ್ಚು ಆಸಕ್ತಿಯಿಂದ ಬರ ಅಧ್ಯಯನ ನಡೆಸುತ್ತಿದ್ದಾರೆ. ನಾವು ಸಹ ಅವರಷ್ಟು ಓಡಾಡುತ್ತಿಲ್ಲ ಎಂದರು.
ರಾಜ್ಯದಲ್ಲಿ ಬರ ಅಧ್ಯಯನ ನಡೆಸಲು ರಾಜ್ಯ ಬಿಜೆಪಿ ಘಟಕ 3 ತಂಡಗಳನ್ನು ರಚಿಸಿದೆ. ಆದರೆ, ಬರ ಅಧ್ಯಯನ ತಂಡದಿಂದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರನ್ನು ಕಡೆಗಣಿಸಲಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ