ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಹಣಬಲ ಗೆಲ್ಲಲಿದೆಯೋ, ಬಿಜೆಪಿ ಜನಬಲ ಗೆಲ್ಲಲಿದೆಯೋ ನೋಡೋಣ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸವಾಲ್ ಹಾಕಿದ್ದಾರೆ.
ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದಿಂದ ಗಳಿಸಿದ ಹಣವನ್ನು ಉಪಚುನಾವಣೆಯಲ್ಲಿ ಹರಿಸುತ್ತಿದೆ. ಹಣದಿಂದ ಮತದಾರರನ್ನು ಖರೀದಿಸಲು ಪ್ರಯತ್ನಿಸುತ್ತಿದೆ. ಆದರೆ, ಮತದಾರ ಇಂತಹ ತಂತ್ರಗಳಿಗೆ ಬಲಿಯಾಗುವುದಿಲ್ಲ ಎಂದು ಗುಡುಗಿದ್ದಾರೆ.
ಸಿಎಂ ಸಿದ್ದರಾಮಯ್ಯ ಮತ್ತು ಅವರ ಸಂಪುಟದ ಸಚಿವರು ಹಣದಿಂದ ಚುನಾವಣೆ ಗೆಲ್ಲಬಹುದು ಎನ್ನುವ ಭ್ರಮೆಯಲ್ಲಿದ್ದಾರೆ. ಉತ್ತರಪ್ರದೇಶ, ಗೋವಾದಲ್ಲಿ ನಡೆದ ಚುನಾವಣೆ ಫಲಿತಾಂಶ ಸಾಕ್ಷಿಯಾಗಿದೆ ಎಂದರು.
ರಾಜ್ಯದ ಜನತೆ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿದ್ದಾರೆ. ಕಾಂಗ್ರೆಸ್‌ಗೆ ಹಣಬಲವಿದ್ದರೆ ಬಿಜೆಪಿಗೆ ಜನಬೆಂಬಲವಿದೆ. ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸುವುದು ಖಚಿತ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.