ನಾಡಗೀತೆಗೆ ಅಪಮಾನ ಸೇರಿದಂತೆ ವಿವಿಧ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ನಿರ್ಮಲಾನಂದ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಅವರನ್ನು ತೆಗೆದು ಹಾಕುವ ಬಗ್ಗೆ ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.
ಹಿರಿಯ ಸಾಹಿತಿ ಕುವೆಂಪು ವಿರುದ್ಧ ಪಠ್ಯಪುಸ್ತಕದಲ್ಲಿ ಪ್ರಕಟವಾಗಿರುವ ಸಾಲುಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ನಿರ್ಮಲಾನಂದ ಸ್ವಾಮೀಜಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಅಲ್ಲದೇ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು.