Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಲೋಕಾಯುಕ್ತ ಹುದ್ದೆಗೆ ಹೊಸ ಹೆಸರನ್ನು ಶಿಫಾರಸ್ಸು ಮಾಡಲ್ಲ: ಸಿಎಂ ಸಿದ್ದರಾಮಯ್ಯ

ಲೋಕಾಯುಕ್ತ ಹುದ್ದೆಗೆ ಹೊಸ ಹೆಸರನ್ನು ಶಿಫಾರಸ್ಸು ಮಾಡಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಬುಧವಾರ, 18 ಜನವರಿ 2017 (18:23 IST)
ಲೋಕಾಯುಕ್ತ ನೇಮಕ ಕುರಿತು ರಾಜ್ಯಪಾಲರಿಗೆ ಸ್ಪಷ್ಟನೆ ನೀಡುತ್ತೇನೆ. ನೇಮಕಕ್ಕೆ ಹೊಸ ಹೆಸರನ್ನು ಶಿಫಾರಸ್ಸು ಮಾಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 
 
ರಾಜ್ಯ ಸಚಿವ ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ನೇಮಕಕ್ಕಾಗಿ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಹೆಸರನ್ನು ಶಿಫಾರಸ್ಸು ಮಾಡಲಾಗಿತ್ತು. ಆದರೆ, ರಾಜ್ಯ ಸರಕಾರದ ಶಿಫಾರಸ್ಸನ್ನು ರಾಜ್ಯಪಾಲರು ತಿರಸ್ಕರಿಸಿದ್ದರು. ಈ ಕುರಿತು ರಾಜ್ಯಪಾಲರಿಗೆ ಸ್ಪಷ್ಟನೆ ನೀಡುತ್ತೇನೆ ಎಂದು ಸ್ಪಷ್ಟಪಡಿಸಿದರು. 
 
ಲೋಕಾಯುಕ್ತ ಹುದ್ದೆಗೆ ರಾಜ್ಯ ಸರಕಾರ ಶಿಫಾರಸ್ಸು ಮಾಡಿದ್ದ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಹೆಸರನ್ನು ರಾಜ್ಯಪಾಲ ವಿ.ಆರ್‌‌.ವಾಲಾ ಅವರು ತಿರಸ್ಕರಿಸಿದ್ದರು. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎರಡು ಪುಟಗಳ ಪತ್ರ ಬರೆದಿರುವ ರಾಜ್ಯಪಾಲರು, ಲೋಕಾಯುಕ್ತ ಹುದ್ದೆಗೆ ಶಿಫಾರಸ್ಸು ಮಾಡಿದ ಸಲಹ ಸಮಿತಿ ಆಯ್ಕೆ ಕುರಿತು ಪ್ರಶ್ನೆ ಮಾಡಿದ್ದರು. 
 
ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ವಿರುದ್ಧ ಆರೋಪಗಳು ಕೇಳಿ ಬಂದಿದ್ದರು ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಪದೇ ಪದೇ ಅವರ ಹೆಸರನ್ನೇ ಶಿಫಾರಸ್ಸು ಮಾಡುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ವಿವಸ್ತ್ರಗೊಳಿಸಿ ಯುವಕನ ಮೇಲೆ ಹಲ್ಲೆ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಂಜನೇಯ ಭರವಸೆ