ಶ್ರೀನಿವಾಸ್ ಪ್ರಸಾದ್ ರಾಜೀನಾಮೆಯಿಂದ ತೆರವಾಗಿರುವ ನಂಜನಗೂಡು ಕ್ಷೇತ್ರ ಮತ್ತು ಸಚಿವ ಮಹದೇವಪ್ರಸಾದ್ ನಿಧನದಿಂದ ತೆರವಾಗಿರುವ ಗುಂಡ್ಲುಪೇಟೆ ಕ್ಷೇತ್ರಕ್ಕೆ ಉಪಚುನಾವಣೆ ವೇಳಾಪಟ್ಟಿ ವಾರಂತ್ಯಕ್ಕೆ ಪ್ರಕಟವಾಗಲಿದೆ ಎಂದು ಚುನಾವಣೆ ಆಯೋಗದ ಮೂಲಗಳು ತಿಳಿಸಿವೆ.
ಮುಂದಿನ ತಿಂಗಳು ನಂಜನಗೂಡು, ಗುಂಡ್ಲುಪೇಟೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಉಪ ಚುನಾವಣೆ ಫಲಿತಾಂಶ 2018ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎನ್ನಲಾಗಿದೆ.
ಹಿರಿಯ ರಾಜಕಾರಣಿ, ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಲಿದ್ದು, ಕಾಂಗ್ರೆಸ್ ಪಕ್ಷದಿಂದ ಬಹುತೇಕ ಕಳಲೆ ಕೃಷ್ಣಮೂರ್ತಿ ಚುನಾವಣಾ ಕಣಕ್ಕೆ ಧುಮಕಲಿದ್ದಾರೆ. ಜೆಡಿಎಸ್ ಪಕ್ಷದಿಂದ ಅಭ್ಯರ್ಥಿ ಯಾರಾಗಲಿದ್ದಾರೆ ಎನ್ನುವ ಬಗ್ಗೆ ಪಕ್ಷ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ ಎನ್ನಲಾಗಿದೆ.
ಸಿಎಂ ಸಿದ್ದರಾಮಯ್ಯ ಮತ್ತು ಶ್ರೀನಿವಾಸ್ ಪ್ರಸಾದ್ ಎದ್ದಿರುವ ಭಿನ್ನಮತದಿಂದಾಗಿ, ಚುನಾವಣೆ ಕಣ ಪ್ರತಿಷ್ಠೆಯ ಕಣವಾಗಿ ಮಾರ್ಪಡುವ ಸಾಧ್ಯತೆಗಳಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.