Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಚಿತ್ರದುರ್ಗ : ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ವೀಕೆಂಡ್ ಕರ್ಫ್ಯೂನಿಂದಾಗಿ ಜನರು ತೀವ್ರ ಸಮಸ್ಯೆ ಅನುಭವಿಸುವಂತಾಗಿದೆ.
ಪ್ರತಿದಿನ ಜನ ಜಂಗುಳಿಯಿಂದ ತುಂಬಿರುತ್ತಿದ್ದ ಚಿತ್ರದುರ್ಗ ಬಸ್ ನಿಲ್ದಾಣ ಸಂಪೂರ್ಣ ಖಾಲಿಯಾಗಿದ್ದು, ಅಂತ್ಯ ಸಂಸ್ಕಾರಕ್ಕೆ ತೆರಳುತ್ತಿದ್ದ ದಾವಣಗೆರೆ ಜಿಲ್ಲೆ ಹರಪನಹಳ್ಳಿ ಮೂಲದ ಮಹಿಳೆ ಕಣ್ಣೀರಿಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ
ಇಂದು ಬೆಳಗಿನ ಜಾವದಿಂದಲೇ ಬಸ್ ನಿಲ್ದಾಣಕ್ಕೆ ಬೆರಳೆಣಿಕೆಯಷ್ಟು ಪ್ರಯಾಣಿಕರು ಮಾತ್ರ ಬಸ್ ನಿಲ್ದಾಣಕ್ಕೆ ಧಾವಿಸಿದ್ದರು. ಆದರೆ ಸೀಟುಗಳು ಭರ್ತಿಯಾಗದ ಹಿನ್ನೆಲೆಯಲ್ಲಿ ಬಸ್ ಗಳಲ್ಲಿ ಹೊರಡುವುದು ವಿಳಂಬವಾಗಿದ್ದು, ಪ್ರಯಾಣ ಮಾಡುವ ಪ್ರಯಾಣಿಕರಿಲ್ಲದೇ ಬಸ್ ಗಳ ಸೀಟುಗಳು ಸಹ ಖಾಲಿ-ಖಾಲಿಯಾಗಿದ್ದವು.
ಈ ನಡುವೆ ದಾವಣಗೆರೆಯ ಹರಪನಹಳ್ಳಿಯಿಂದ ಬಂದಿದ್ದ ಮಹಿಳೆಯೊಬ್ಬರು ಬೆಂಗಳೂರಿನಲ್ಲಿ ಅವರ ಸಂಬಂಧಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಬಸ್ನಲ್ಲಿ ಕುಳಿತ್ತಿದ್ದಾರೆ. ಆದರೆ ಬಸ್ ಹೊರಡುವುದು ವಿಳಂಬವಾದ ಹಿನ್ನೆಲೆ ಪರದಾಡುತ್ತಾ ಕಣ್ಣೀರಿಟ್ಟಿದ್ದಾರೆ.