ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಉದ್ಯೋಗ ಮೇಳ ಆಯೋಜಿಸುತ್ತಿರುವುದರಿಂದ ಉದ್ಯೋಗವಕಾಶಗಳು ಹೆಚ್ಚಾಗುತ್ತಿರುವುದು ಸರಕಾರದ ಸಾಧನೆಯಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ವಿಧಾನಪರಿಷತ್‌ನಲ್ಲಿ ಬಿಜೆಪಿ ಮುಖಂಡ ಅಮರನಾಥ್ ಪಾಟೀಲ್ ಹೈ-ಕ ಅಭಿವೃದ್ಧಿ ಕುರಿತ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಸರಕಾರ ಸಮಗ್ರ ಅಭಿವೃದ್ಧಿಗೆ ಬದ್ದವಾಗಿದೆ ಎಂದು ಸ್ಪಷ್ಟಪಡಿಸಿದರು.
ವಿಧಾನಪರಿಷತ್‌ನಲ್ಲಿ ಹೈ-ಕ ಭಾಗದ ಕುರಿತು ಚರ್ಚೆಯಲ್ಲಿ ಪಾಲ್ಗೊಂಡ ಸಿಎಂ, ಖಾಸಗಿ ಕ್ಷೇತ್ರದಲ್ಲೂ ಉದ್ಯೋಗ ಅವಕಾಶಗಳು ಹೆಚ್ಚುತ್ತಿವೆ. ಮುಂದಿನ ವರ್ಷ ಐದು ಲಕ್ಷ ಉದ್ಯೋಗ ನೀಡುವ ಗುರಿಯನ್ನು ಹೊಂದಿದ್ದೇವೆ ಎಂದರು.
ರಾಜ್ಯ ಸರಕಾರ ಹೈದ್ರಾಬಾದ್-ಕರ್ನಾಟಕ ಭಾಗಕ್ಕೆ ಹೆಚ್ಚಿನ ಒತ್ತು ನೀಡಿದ್ದೇವೆ. 6 ಸಾವಿರ ಮೆಡಿಕಲ್ ಮತ್ತು ಇಂಜಿನಿಯರಿಂಗ್ ಸೀಟುಗಳ ಸೌಲಭ್ಯ ನೀಡಿರುವುದು ಸರಕಾರದ ಸಾಧನೆಯಲ್ಲವೇ ಎಂದು ವಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.