ಬಿಜೆಪಿ ಮುಖಂಡ ಸೊಗಡು ಶಿವಣ್ಣ ಕಾಂಗ್ರೆಸ್ ಸಿದ್ದಾಂತಗಳನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾಗುವುದಾದರೇ ಸ್ವಾಗತ ಎಂದು ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಪರಿವರ್ತನೆ ಯಾತ್ರೆ ಮೊದಲ ದಿನವೇ ವಿಫಲವಾಗಿದೆ. ಲಕ್ಷ ಲಕ್ಷ ಜನರು ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದರು. ಆದರೆ, ಅಲ್ಲಿ ಬಂದಿದ್ದು 20 ಸಾವಿರ ಕಾರ್ಯಕರ್ತರು ಎಂದು ಲೇವಡಿ ಮಾಡಿದ್ದಾರೆ.
ಬಿಜೆಪಿ ನಾಯಕರ ನಡುವಳಿಕೆಯಿಂದ ಬಿಜೆಪಿ ಶಾಸಕರಿಗೆ ಭ್ರಮನಿರಸನವಾಗಿದೆ. ಶಾಸಕರು ಪಕ್ಷವನ್ನು ಬದಲಿಸುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.
ಬಿಜೆಪಿ ಪರಿವರ್ತನಾ ಯಾತ್ರೆಯಲ್ಲ ಕೆಜಿಪಿ ಪಕ್ಷದ ಯಾತ್ರೆಯಾಗಿದೆ. ಕೆಜೆಪಿ ಪಕ್ಷದಲ್ಲಿದ್ದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಸೊಗಡು ಶಿವಣ್ಣ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.