ಕಲ್ಯಾಣ ಕರ್ನಾಟಕದಲ್ಲಿ ನೇರ ನೇಮಕಕ್ಕೆ ಅಸ್ತು ?

Webdunia
ಶುಕ್ರವಾರ, 26 ನವೆಂಬರ್ 2021 (13:01 IST)
ಕೊರೋನಾದಿಂದ  ಉಂಟಾದ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ವೆಚ್ಚ ಕಡಿತ ಮಾಡಲು ಕಲ್ಯಾಣ ಕರ್ನಾಟಕ ಭಾಗದ ವಿವಿಧ ಹುದ್ದೆಗಳ ನೇಮಕಾತಿಗೆ ತಡೆ ನೀಡಿದ್ದ ಆದೇಶವನ್ನು ಸರ್ಕಾರ ಹಿಂಪಡೆದಿದ್ದು,
ಷರತ್ತುಗಳೊಂ ದಿಗೆ ನೇರ ನೇಮಕಕ್ಕೆ ಅವಕಾಶ ನೀಡಿ ಆದೇಶ ನೀಡಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಲು ವಿವಿಧ ಇಲಾಖೆಗಳಲ್ಲಿ ಅಧಿಕಾರಿ, ಸಿಬ್ಬಂದಿ ಕೊರತೆ ಉಂಟಾಗಿದೆ.
ಹೀಗಾಗಿ ಆ ಭಾಗದಲ್ಲಿ ನೇರ ನೇಮ ಕಾತಿಯಲ್ಲಿ ಬಾಕಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಹಂತದಲ್ಲಿಯೇ ನೇಮಕಾತಿ ಪ್ರಕ್ರಿಯೆ ಮುಂದುವರೆಸಿ ನಿಯಮಾನುಸಾರ ಭರ್ತಿ ಮಾಡಿಕೊಳ್ಳಲು ಸೂಚಿಸಲಾಗಿದೆ.
 ಕಲ್ಯಾಣ ಕರ್ನಾಟಕ ವೃಂದದಲ್ಲಿ ಈಗಾಗಲೇ ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಸಹಮತಿ ನೀಡಿರುವ ಪ್ರಕರಣಗಳಲ್ಲಿ ನೇಮಕಾತಿ ಆದೇಶ ನೀಡಬೇಕು. ಉಳಿದ ಇಲಾಖೆಗಳಲ್ಲಿ ವೃಂದ ಬಲ ಶೇ.80ಕ್ಕಿಂತ ಕಡಿಮೆ ಇದ್ದರೆ ಮಾತ್ರ ವೃಂದದ ಶೇ.80ರಷ್ಟರವರೆಗಿನ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ನೇಹಮಯಿ ಕೃಷ್ಣಗೆ ನಕಲಿ ಆಡಿಯೋ ನೀಡಿದ್ದ ವ್ಯಕ್ತಿಗೆ ಬಂಧನ ಭಾಗ್ಯ

23 ಗಂಟೆಗಳ ವಿಚಾರಣೆಗೆ ಒಳಪಡಿಸುತ್ತಿದ್ದ ಹಾಗೇ ಶಾಲಿನಿ ರಜನೀಶ್ ವಿರುದ್ಧ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ

ಸಿಎಂ ಕುರ್ಚಿಗಾಗಿ ಹೆಚ್ಚಿದ ಗುದ್ದಾಟ: ಕುತೂಹಲ ಮೂಡಿಸಿದ ಡಿಸಿಎಂ ಆಪ್ತ ಶಾಸಕನ ಹೇಳಿಕೆ

ಮುಂದಿನ ತಿಂಗಳೊಳಗೆ ದೇಶದಲ್ಲಿ ನಕ್ಸಲಿಸಂ ಅಂತ್ಯ; ಅಮಿತ್‌ ಶಾ

ಪಾಕ್ ಮಸೀದಿ ಸ್ಫೋಟಕ್ಕೆ 'ಸೇಡು ತೀರಿಸಿಕೊಳ್ಳಲು' ಎಲ್‌ಇಟಿ ದಾಳಿಗೆ ಸಂಚು

ಮುಂದಿನ ಸುದ್ದಿ
Show comments