ಬೆಂಗಳೂರು : ವಿದ್ವತ್ ಮೇಲೆ ಹಲ್ಲೆ ನಡೆಸಿ ಜೈಲು ಸೇರಿರುವ ಶಾಸಕ ಹ್ಯಾರಿಸ್ ಪುತ್ರ ರೌಡಿ ನಲಪಾಡ್ ಅವರ ಜಾಮೀನು ಅರ್ಜಿ ವಿಚಾರಣೆ ಶುಕ್ರವಾರ (ಇಂದು) ನಡೆಯಲಿದ್ದು, ಆದರೆ ಜಾಮೀನು ಕೋರಿ ನಲಪಾಡ್ ಸಲ್ಲಿಸಿರುವ ಅರ್ಜಿಯಲ್ಲಿ ವಿರೋಧ ಪಕ್ಷ ಹಾಗು ಮಾಧ್ಯಮಗಳ ಮೇಲೆ ಆರೋಪ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ರೌಡಿ ನಲಪಾಡ್ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯಲ್ಲಿ,’ ರಾಜಕೀಯ ಮೈಲೇಜ್‍ಗಾಗಿ ಶತ್ರುಗಳು ಈ ರೀತಿ ಮಾಡಿದ್ದಾರೆ. ಚುನಾವಣಾ ಸಮಯವಾದ್ದರಿಂದ ನನ್ನನ್ನು ಸೋಲಿಸಲು ಈ ರೀತಿಯ ಕುತಂತ್ರ ಮಾಡಲಾಗಿದೆ. ಇದರಿಂದ ತಮ್ಮ ಕ್ಷೇತ್ರದ ಮತದಾರರನ್ನು ಸೆಳೆಯಲು ಪ್ರತಿಪಕ್ಷಗಳು ಹುನ್ನಾರ ಮಾಡಿವೆ. ಮಾಧ್ಯಮಗಳು ಅನಾವಶ್ಯಕವಾಗಿ ಇದನ್ನು ಹೈಪ್ ಮಾಡಿದೆ. ನನ್ನ ಮೇಲೆ ದೂರು ದಾಖಲಿಸಿರುವುದು ಸುಳ್ಳು ಕೇಸ್. ಆಧಾರ ರಹಿತವಾದ, ರಾಜಕೀಯ ದುರುದ್ದೇಶದಿಂದ ಕೇಸ್ ದಾಖಲಿಸಲಾಗಿದೆ. ನನ್ನ ಹಾಗೂ ತಂದೆಯ ಏಳಿಗೆ ಸಹಿಸದವರು ಆಧಾರ ರಹಿತ ಕೇಸ್ ದಾಖಲಿಸಿದ್ದಾರೆ. 10 ರಿಂದ 15 ಜನ ಹಲ್ಲೆ ಅಂತಿದೆ. ನಾನೇ ಹಲ್ಲೆ ಮಾಡಿದ್ದೇನೆ ಅಂತಿಲ್ಲ. ಹೀಗಾಗಿ ಜಾಮೀನು ನೀಡಬೇಕು’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ