Publish Date: Tue, 15 May 2018 (13:09 IST)
Updated Date: Tue, 15 May 2018 (13:11 IST)
ಬೆಂಗಳೂರು : ಈ ಬಾರಿ ಚುನಾವಣೆಯಲ್ಲಿ ಪದ್ಮನಾಭನಗರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.
ಪದ್ಮನಾಭನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆರ್. ಅಶೋಕ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅಶೋಕ್ 73001 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ, ಇನ್ನು ಅವರ ಪ್ರತಿಸ್ಪರ್ಧಿ ಬಿ.ಕೆ. ಗೋಪಾಲ್ ಅವರು 44,496 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್ ಅವರು, ‘ನಮ್ಮದು ಒಂದೇ ಗುರಿ ಅದು ಅಭಿವೃದ್ಧಿ, ಮೋದಿಯ ಅಲೆಯ ಈಗ ಶುರುವಾಗಿದೆ. ನಿರೀಕ್ಷೆಯಂತೆ ಬಿಜೆಪಿ ಜಯಭೇರಿ ಭಾರಿಸಿದೆ. ಸಿದ್ದರಾಮಯ್ಯ ಆಡಳಿತವನ್ನು ಜನ ತಿರಸ್ಕರಿಸಿದ್ದಾರೆ. ರಾಜ್ಯದ ಜನತೆ ಬಿಜೆಪಿಗೆ ಬೆಂಬಲ ನೀಡಿದ್ದಾರೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ