ವಿಧಾನಸಭೆ ಕಲಾಪವನ್ನು ಬಹಿಷ್ಕರಿಸಿ ಧರಣಿ ನಡೆಸುತ್ತಿರುವ ಬಿಜೆಪಿ ಶಾಸಕರನ್ನು ಬೆಂಬಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ , ಕಾಂಗ್ರೆಸ್ ಪಕ್ಷ ಸಂಸತ್ತಿನಲ್ಲಿ ಏನು ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದರು.
ಕಲಾಪಕ್ಕೆ ಬಿಜೆಪಿ ನಾಯಕರು ಅಡ್ಡಿಯಾಗಿದ್ದಾರೆ ಎನ್ನುವ ಆರೋಪಗಳನ್ನು ತಳ್ಳಿಹಾಕಿದ ಅವರು, ಕಾಂಗ್ರೆಸ್ ಪಕ್ಷ ಸಂಸತ್ತಿನಲ್ಲಿ ಬೇಜವಾಬ್ದಾರಿ ತೋರುತ್ತಿಲ್ಲವೇ? ನವದೆಹಲಿಯಲ್ಲಿ ಕಲಾಪಕ್ಕೆ ಅಡ್ಡಿಪಡಿಸುವುದು ನ್ಯಾಯವೇ ಎಂದು ಕಿಡಿಕಾರಿದರು.
ಕಲಾಪದಲ್ಲಿ ಡೈರಿ ವಿಷಯ ಚರ್ಚೆಗೆ ಬಂದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಸಚಿವರ, ಶಾಸಕರ ಬಂಡವಾಳ ಬಯಲಾಗುತ್ತದೆ ಎನ್ನುವ ಆತಂಕದಿಂದ ಸರಕಾರ ಚರ್ಚೆಗೆ ಅವಕಾಶ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆ ಮತ್ತು ವಿಧಾನ ಪರಿಷತ್ ಕಲಾಪದಲ್ಲಿ ಡೈರಿ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚೆಗೆ ಅವಕಾಶ ದೊರೆಯದಿರುವ ಹಿನ್ನೆಲೆಯಲ್ಲಿ, ಬಿಜೆಪಿ ಶಾಸಕರು ಧರಣಿಯನ್ನು ಮುಂದುವರಿಸಿದ್ದಾರೆ. ಅದರಲ್ಲೇನು ತಪ್ಪಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.