ಬೆಂಗಳೂರು : ಈಗಾಗಲೇ ಮೈತ್ರಿ ಸರ್ಕಾರದ ಅತೃಪ್ತ ನಾಯಕರು ಅಪರೇಷನ್ ಕಮಲಕ್ಕೆ ಬಲಿಯಾಗಿ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಕಡೆ ಮುಖ ಮಾಡಲು ಹೊರಟಿದ್ದಾರೆ. ಈ ಮಧ್ಯ ಇದೀಗ ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮಿಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಗಾಳ ಹಾಕಿದೆ ಎಂಬ ಮಾತು ಕೇಳಿಬಂದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು 5 ದಿನಗಳ ಹಿಂದೆ ಬೆಂಗಳೂರಿನ ಬಸವೇಶ್ವರನಗರ ಸಮೀಪದ ಮನೆಯೊಂದರಲ್ಲಿ ಶಾಸಕಿ ಲಕ್ಷ್ಮಿಹೆಬ್ಬಾಳ್ಕರ್ ಅವರನ್ನ ಭೇಟಿ ಮಾಡಿ ಬಿಜೆಪಿಗೆ ಆಹ್ವಾನಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಬಿಎಸ್ ಯಡಿಯೂರಪ್ಪ ಅವರು, ಲಕ್ಷ್ಮಿಹೆಬ್ಬಾಳ್ಕರ್ ಅವರನ್ನ ಬಿಜೆಪಿಗೆ ಸೇರಿಸಿಕೊಳ್ಳಲು ನಮಗೆ ತಲೆ ಕೆಟ್ಟಿದ್ಯಾ? ಶಾಸಕಿ ಲಕ್ಷ್ಮಿಹೆಬ್ಬಾಳ್ಕರ್ ಬಿಜೆಪಿಗೆ ಬರುವುದಾಗಿ ಹೇಳಿಲ್ಲ. ಅವರನ್ನ ಬಿಜೆಪಿಗೆ ಸೇರಿಸಿಕೊಳ‍್ಳುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.